LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಿನಗೂಲಿ ನೌಕರರ ಪರವಾಗಿ  ಹೈಕೋರ್ಟ್ ಮಹತ್ವದ ಆದೇಶ.!

ದಿನಗೂಲಿ ನೌಕರರ ಪರವಾಗಿ  ಹೈಕೋರ್ಟ್ ಮಹತ್ವದ ಆದೇಶ.!

 ಬೆಂಗಳೂರು: ಸರ್ಕಾರಿ ಇಲಾಖೆಗಳು ಹಾಗೂ ಸಂಸ್ಥೆಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿದ ದಿನಗೂಲಿ ನೌಕರರು ನಿವೃತ್ತರಾಗಿದ್ದಾರೆ ಎಂಬ ಕಾರಣ ನೀಡಿ, ಅವರ ಸೇವೆ ಕಾಯಂಗೊಳಿಸುವ ಕೋರಿಕೆಯನ್ನು ಸರ್ಕಾರ ತಿರಸ್ಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ.

ತಾತ್ಕಾಲಿಕ ಉದ್ಯೋಗದ ನೆಪದಲ್ಲಿ ಕಾರ್ಮಿಕರಿಂದ ಶಾಶ್ವತ ಪ್ರಯೋಜನ ಪಡೆದುಕೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧ ಹಾಗೂ ಶೋಷಣೆಗೆ ಸಮ. ಮೂರು ದಶಕಗಳ ಕಾಲ ಸೇವೆ ಪಡೆದು ನಿವೃತ್ತಿಯ ಹೊಸ್ತಿಲಲ್ಲಿ ಕಾಯಂಗೊಳಿಸಲು ನಿರಾಕರಿಸುವುದು ಮಾದರಿ ಸರ್ಕಾರದ ಲಕ್ಷಣವಲ್ಲ ಎಂದು ಪೀಠವು ಕಟುವಾಗಿ ಆಕ್ಷೇಪಿಸಿದೆ.

ದಾಂಡೇಲಿ ನಗರಸಭೆಯಲ್ಲಿ 1988ರಿಂದ 2022ರವರೆಗೆ ಬಸವಲಕ್ಷ್ಮಿ/ಬೆರಳಚ್ಚುಗಾರರಾಗಿ 34 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಗೀತಾ ರಾಮಪ್ಪ ತೇರದಾಳ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ಅರ್ಜಿದಾರರು 10 ವರ್ಷಗಳ ಸೇವಾವಧಿ ಪೂರ್ಣಗೊಳಿಸಿದ ದಿನಾಂಕದಿಂದಲೇ ಅನ್ವಯವಾಗುವಂತೆ ಅವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಉದ್ಯೋಗಿ ನಿವೃತ್ತರಾಗಿದ್ದಾರೆ ಎಂಬ ಕಾರಣ ಮಾತ್ರಕ್ಕೆ ಅವರ ಸೇವಾವಧಿಯಲ್ಲಿ ಸೃಷ್ಟಿಯಾದ ನ್ಯಾಯಸಮ್ಮತ ಹಕ್ಕು ಅಥವಾ ಸೇವೆ ಕಾಯಂಗೊಳಿಸುವ ಕೋರಿಕೆಯು ಅಸ್ತಿತ್ವ ಕಳೆದುಕೊಳ್ಳುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಅರ್ಜಿದಾರರ ಒಟ್ಟು 34 ವರ್ಷಗಳ ಸಂಪೂರ್ಣ ಸೇವೆಯನ್ನು ಪರಿಗಣಿಸಿ ಪಿಂಚಣಿ, ಗ್ರಾಚ್ಯುಟಿ ಸೇರಿದಂತೆ ಇಳಿವಯಸ್ಸಿಗೆ ಸಿಗಬೇಕಾದ ಎಲ್ಲಾ ನಿವೃತ್ತಿ ಸೌಲಭ್ಯಗಳನ್ನು ಮರುಪರಿಗಣಿಸಿ ಮುಂದಿನ ಎಂಟು ವಾರಗಳ ಒಳಗೆ ಸೂಕ್ತ ಆದೇಶ ಹೊರಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಪೀಠ ಗಡುವು ನೀಡಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ಆದೇಶ ಪಾಲಿಸಲು ತಪ್ಪಿದಲ್ಲಿ, ಉದ್ಯೋಗಿಗೆ ಪಾವತಿಸಬೇಕಾದ ವೇತನ ಬಾಕಿ ಮೊತ್ತಕ್ಕೆ ಶೇ. 50ರಷ್ಟು ಬಡ್ಡಿ ಸೇರಿಸಿ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST