LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!

ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!

ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!

ಚಿತ್ರದುರ್ಗ: ಮುಂದಿನ ದಿನದಲ್ಲಿ ನಡೆಯಲಿರುವ ಹಿರಿಯೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಜಿಲ್ಲಾ ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷರು, ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಶಿವುಯಾದವ್ ರವರಿಗೆ ಕಾಂಗ್ರೆಸ್ ಪಕ್ಷ ಬಿ-ಫಾರಂ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ರವರನ್ನು ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆ ಆಗ್ರಹಿಸಿದೆ.

ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆಯ ಪದಾಧಿಕಾರಿಗಳು, ಸಿ.ಶಿವುಯಾದವ್ ರವರು ಹಿರಿಯ ವಕೀಲರಾಗಿದ್ದು, ಜಿಲ್ಲಾ ಕಾಂಗ್ರೆಸ್ನಲ್ಲಿ ಸುಮಾರು 35 ವರ್ಷಗಳಿಂದಲೂ ವಿದ್ಯಾರ್ಥಿ ಕಾಂಗ್ರೆಸ್ನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಪಕ್ಷ ಸಂಘಟನೆಗೆ ಸಕ್ರಿಯವಾಗಿ, ಪ್ರಾಮಾಣಿಕವಾಗಿ ತೊಡಗಿಸಿಕೊಂಡಿರುತ್ತಾರೆ. 2014, 2018, 2023ರಲ್ಲಿ ಚಿತ್ರದುರ್ಗ ವಿಧಾನಸಭೆಗೆ ಸ್ಪರ್ಧೆ ಮಾಡಲು ನಾಮಪತ್ರ ಸಲ್ಲಿಸಿದಾಗ ರಾಜ್ಯ ಮತ್ತು ರಾಷ್ಟ್ರ ಮುಖಂಡರು ಭವಿಷ್ಯದಲ್ಲಿ ಸೂಕ್ತ ಸ್ಥಾನಮಾನ ಅವಕಾಶ ನೀಡುವ ಭರವಸೆ ನೀಡಿದ ಹಿನ್ನಲೆಯಲ್ಲಿ ಪಕ್ಷದ ಹಿತದೃಷ್ಠಿಯಿಂದ ತಮ್ಮ ನಾಮಪತ್ರವನ್ನು ವಾಪಾಸ್ಸು ಪಡೆದಿದ್ದರು. ಪಕ್ಷದ ನಿರ್ಧಾರವನ್ನು ಗೌರವಿಸಿ, ಯಾವುದೇ ಅಸಮಾಧಾನ ವ್ಯಕ್ತಪಡಿಸದೇ ನಿಷ್ಠೆಯಿಂದ ಪಕ್ಷ ಸಂಘಟನೆ ಹಾಗೂ ಪಕ್ಷ ಗುರುತಿಸಿದ ಅಭ್ಯರ್ಥಿಗಳ ಗೆಲುವಿಗೆ ನಿರಂತರವಾಗಿ ಶ್ರಮಿಸಿರುತ್ತಾರೆ.

ಸಿ.ಶಿವುಯಾದವ್ ರವರು ಹಿರಿಯೂರು ತಾಲ್ಲೂಕಿನವರಾಗಿದ್ದು, ಬಹುಸಂಖ್ಯಾತ ಸಮಾಜವಾದ ಕಾಡುಗೊಲ್ಲರ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುತ್ತಾರೆ. ಜಿಲ್ಲೆಯಲ್ಲಿ ಅನೇಕ ಜನಪರ ಹೋರಾಟಗಳಲ್ಲಿ, ಪ್ರಗತಿಪರ ಹೋರಾಟಗಳಲ್ಲಿ ಭಾಗವಹಿಸಿರುತ್ತಾರೆ. ಭದ್ರಾ ಮೇಲ್ದಂಡೆ, ರೈಲ್ವೆ ಹೋರಾಟ, ಅಕ್ರಮ ಗಣಿಗಾರಿಕೆ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ. ಆದ್ದರಿಂದ ಪಕ್ಷದ ಮೇಲಿನ ಅವರ ಅಚಲ ನಿಷ್ಠೆ, ತ್ಯಾಗ, ಸೇವೆ ಹಾಗೂ ಹಿರಿಯೂರು ಕ್ಷೇತ್ರದಲ್ಲಿ ಅವರು ಹೊಂದಿರುವ ಜನಬೆಂಬಲವನ್ನು ಪರಿಗಣಿಸಿ ಈ ಬಾರಿ ನಡೆಯಲಿರುವ ಹಿರಿಯೂರು ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಸಿ.ಶಿವುಯಾದವ್ ರವರಿಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ-ಫಾರಂ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆ ಮನವಿ ಮಾಡಿದ್ದಾರೆ.

ಇತ್ತೀಚಿಗೆ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲಿ ವಕೀಲರ ಪ್ರತಿನಿಧಿತ್ವ ಗಣನೀಯಾಗಿ ಕಡಿಮೆಯಾಗಿದೆ. ಸಮಾಜದ ಕಾನೂನು ಅರಿವು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕರ ಹಿತ ಕಾಪಾಡುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದಾಗಿದೆ. ಕಾನೂನು ರಚನೆಗಳಲ್ಲಿ ವಕೀಲರು, ಅತ್ಯವಶ್ಯಕವಾಗಿರುತ್ತದೆ. ಆ ನಿಟ್ಟಿನಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ಗಳಲ್ಲಿ ವಕೀಲರ ಸಂಖ್ಯೆ ಗಣನೀಯವಾಗಿ ಕ್ಷೀಣಿಸಿರುತ್ತದೆ. ಜನಪ್ರತಿನಿಧಿಗಳಿಗೆ ಕಾನೂನಿನ ಅರಿವು ಅತ್ಯವಶ್ಯಕವಾಗಿರುತ್ತದೆ. ಹಿರಿಯ ವಕೀಲರಾದ ಶಿವುಯಾದವ್ ರವರಿಗೆ ಕಾಂಗ್ರೆಸ್ ಪಕ್ಷದಿಂದ ಬಿ-ಫಾರಂ ನೀಡಿದರೆ ಹಿರಿಯೂರಿನಿಂದ ಗೆಲುವು ನಿಶ್ಚಿತ. ಏಕೆಂದರೆ ಸುಮಾರು 30 ವಷರ್Àಗಳಿಂದ ಧರ್ಮಪುರ ತಾಲ್ಲೂಕು ಮತ್ತು ಪೀಡರ್ ಚಾನಲ್ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದು, ಹಿರಿಯೂರು ತಾಲ್ಲೂಕಿನ ಜನಮನಗಳಲ್ಲಿ ಮನೆಮಾತಾಗಿದ್ದಾರೆ. ಶಿವುಯಾದವ್ ರವರು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಮತ್ತು ಹಿರಿತನವನ್ನು ಪರಿಗಣಿಸಿ ಅವರಿಗೆ ಹಿರಿಯೂರು ತಾಲ್ಲೂಕಿನ ಉಪಚುನಾವಣೆಯ ಬಿ-ಫಾರಂ ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆಯ ಪರವಾಗಿ ಒತ್ತಾಯಿಸಲಾಯಿತು.

 ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಯುವ ವಕೀಲರ ವೇದಿಕೆಯ ಚಿಕ್ಕಪ್ಪನಹಳ್ಳಿ  ಶರಣಪ್ಪ ಅಶೋಕ್ ಬೆಳಗಟ್ಟ, ವೆಂಕಟೇಶ್, ಲಕ್ಷ್ಮಿಪತಿ, ತಿಪ್ಪೆರುದ್ರಪ್ಪ, ಮಂಜುಳಾ, ಗುರುಮೂರ್ತಿನಂದಿಹಳ್ಳಿ, ರಾಜಪ್ಪ, ಮೆಹಬೂಬ್ ಬಾಷಾ, ಶಂಕರ್ ಸೇರಿದಂತೆ ಇತರರು ಭಾಗವಹಿಸಿದ್ದರು

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!ಶಿಕ್ಷಣ ಸಚಿವರ ರಾಜೀನಾಮೆ ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ ಹೀಗಿದೆ.!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ.!ಸೋನಮ್ ವಾಂಗ್ಚುಕ್ ಅವರ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಇಲ್ಲಿದೆ ಉತ್ತರ ಶಾಪ ವಿಮೋಚನ ವಿಧಿ ಎಂಬುದು ಸನಾತನ ಧರ್ಮದಲ್ಲಿ ಹಿಂದಿನ ಜನ್ಮದ ನಕಾರಾತ್ಮಕ ಆಲೋಚನೆಗಳಿಂದ ಉಂಟಾಗುವ ಕಷ್ಟಗಳನ್ನು ದೂರ ಮಾಡಲು ಮಾಡುವ ದಿವ್ಯ ಪ್ರಕ್ರಿಯೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!