LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!

ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!

 

ಚಿತ್ರದುರ್ಗ: ಜಿಲ್ಲೆಯ ದಶಕಗಳ ಕನಸು ಕೊನೆಗೂ ನನಸಾಗುವ ಕಾಲ ಹತ್ತಿರವಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಪ್ರಥಮವಾಗಿ ಭದ್ರಾ ನದಿಯ ನೀರನ್ನು ಸೆ.6 ರಿಂದ ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ.

ಸರ್ಕಾರದ ಆದೇಶ ಅನ್ವಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತವು ನೀರು ಹರಿಸಲು ಕ್ರಮ ಕೈಗೊಂಡಿದ್ದು, ಇದು ಜಿಲ್ಲೆಯ ಜನತೆಯಲ್ಲಿ ಹಾಗೂ ರೈತರಲ್ಲಿ ತೀವ್ರ ಸಂತಸ ಮತ್ತು ಉತ್ಸಾಹವನ್ನು ಮೂಡಿಸಿದೆ.

ಸೆ.6 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಸಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯ ಚೈ. 0.00 ಕಿಮೀ ನಿಂದ ಚೈ. 114.142 ಕಿಮೀ ವರೆಗೆ ನೀರು ತಲುಪಲಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತು ಚಿತ್ರದುರ್ಗ ತಾಲೂಕುಗಳ ಮೂಲಕ ಹಾದುಹೋಗಿ ಗೋನೂರು ಕೆರೆಯವರೆಗೆ ನೀರು ಹರಿಯಲಿದೆ. ಮುಂದಿನ ಹಂತದಲ್ಲಿ ನೈಸರ್ಗಿಕ ಹಳ್ಳದ ಮುಖಾಂತರ ಚಳ್ಳಕೆರೆ ತಾಲೂಕಿನ ರಾಣೇಕೆರೆ ವರೆಗೆ ನೀರನ್ನು ಹರಿಸಲಾಗುತ್ತದೆ.

ಸಾರ್ವಜನಿಕ ಸುರಕ್ಷತೆ ಮತ್ತು  ಮುಂಜಾಗ್ರತಾ ಸೂಚನೆಗಳು:

ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕಾಲುವೆ ಹಾಗೂ ಹಳ್ಳಗಳ ಪಾತ್ರಗಳಲ್ಲಿ ಸಾರ್ವಜನಿಕರು ಓಡಾಡುವುದು, ಜನ-ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು, ಕಾಲುವೆ/ಹಳ್ಳಗಳಲ್ಲಿ ಈಜಾಡುವುದು ಹಾಗೂ ಇನ್ನಿತರ ಅಪಾಯಕಾರಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಗಮದ ಆಸ್ತಿಯಾದ ನೀರಾವರಿ ಕಾಲುವೆ ಅಥವಾ ಕಟ್ಟಡಗಳನ್ನು ಹಾನಿಗೊಳಿಸುವುದು ಹಾಗೂ ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ಕಾನೂನುಬಾಹಿರವಾಗಿದೆ. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ಪ್ರಕಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧೀಕ್ಷಕ ಇಂಜಿನಿಯರ್‌ ತಿಳಿಸಿದ್ದಾರೆ.

ಬರಪೀಡಿತ ಚಿತ್ರದುರ್ಗ ಜಿಲ್ಲೆಗೆ ಭದ್ರಾ ನದಿ ನೀರು ಹರಿಯುತ್ತಿರುವುದು ಕೃಷಿ ಮತ್ತು ಕುಡಿಯುವ ನೀರಿನ ಅಭಾವಕ್ಕೆ ದೊಡ್ಡ ಪರಿಹಾರ ಸಿಕ್ಕಂತಾಗಿದ್ದು, ಜಿಲ್ಲೆಯಾದ್ಯಂತ ಸಂಭ್ರಮದ ವಾತಾವರಣ ನೆಲೆಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?