LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹೊಸ ಮತದಾರರ ಪಟ್ಟಿಯ ಬದಲಿಗೆ, ಹಿಂದಿನ ಮತದಾರರ ಪಟ್ಟಿಯೇ ಆಧಾರ ಜಿ.ಪಂ.-ತಾಪಂ ಚುನಾವಣೆ.!

ಹೊಸ ಮತದಾರರ ಪಟ್ಟಿಯ ಬದಲಿಗೆ, ಹಿಂದಿನ ಮತದಾರರ ಪಟ್ಟಿಯೇ ಆಧಾರ ಜಿ.ಪಂ.-ತಾಪಂ ಚುನಾವಣೆ.!

 ಬೀದರ್: ಕೇಂದ್ರ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಸಿದ್ಧವಾಗುವ ಹೊಸ ಮತದಾರರ ಪಟ್ಟಿಯ ಬದಲಿಗೆ, ಹಿಂದಿನ ಮತದಾರರ ಪಟ್ಟಿಯನ್ನೇ ಆಧಾರವಾಗಿಟ್ಟುಕೊಂಡು ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಸಾಧ್ಯತೆಗಳ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೀದರ್‌ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ನವೆಂಬರ್ 5ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಕಾನೂನಿನಲ್ಲಿ ಹಿಂದಿನ ಮತದಾರರ ಪಟ್ಟಿಯನ್ನು ಬಳಸಿಕೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅವಕಾಶವಿದೆ. ಹೀಗಾಗಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಚುನಾವಣೆ ಮತ್ತಷ್ಟು ವಿಳಂಬವಾಗದಂತೆ ಕ್ರಮ ಕೈಗೊಳ್ಳುವ ಉದ್ದೇಶ ಸರ್ಕಾರಕ್ಕಿದೆ ಎಂಬ ಸುಳಿವು ನೀಡಿದ್ದಾರೆ.

 

ಎಸ್‌ಐಆರ್‌ ಗೂ ಮೊದಲಿನ ಮತದಾರರ ಪಟ್ಟಿ ಬಳಕೆಗೆ ಚಿಂತನೆ

ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಸಂದರ್ಭದಲ್ಲಿ ಮತದಾರರ ಪಟ್ಟಿ ಪ್ರಮುಖ ವಿಚಾರವಾಗಿದೆ. ಪ್ರಸ್ತುತ ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿ ಸಿದ್ಧವಾಗಲು ಸಮಯ ಬೇಕಾಗಬಹುದು.

ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತಷ್ಟು ಮುಂದೂಡಿಕೆಯಾಗುವ ಸಾಧ್ಯತೆ ಇರುವುದರಿಂದ, ಎಸ್‌ಐಆರ್‌ಗೂ ಮುನ್ನ ಇದ್ದ ಮತದಾರರ ಪಟ್ಟಿಯನ್ನೇ ಬಳಸಿಕೊಂಡು ಚುನಾವಣೆ ನಡೆಸಬಹುದೇ ಎಂಬ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ.

ಈ ಹಿಂದೆ ಸಿದ್ಧಪಡಿಸಿರುವ ಮತದಾರರ ಪಟ್ಟಿಯ ಆಧಾರದ ಮೇಲೆ ಚುನಾವಣೆ ನಡೆಸಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸಿ, ನವೆಂಬರ್ 5ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಸಿದ್ಧತೆಯ ಭಾಗವಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಿಸಿದಂತೆ ಮೊದಲ ಹಂತದ ಅಧಿಸೂಚನೆ ಹೊರಡಿಸಲಾಗಿದೆ.

ಅಕ್ಟೋಬರ್ 19ರವರೆಗೆ ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 2,200 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಸದ್ಯ ಅಧಿಕಾರಿಗಳು ಈ ಆಕ್ಷೇಪಣೆಗಳನ್ನು ಪರಿಶೀಲಿಸುತ್ತಿದ್ದು, ಅರ್ಹ ಆಕ್ಷೇಪಣೆಗಳನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಳಿಸಿ ಇನ್ನೊಂದು ವಾರದೊಳಗೆ ಅಂತಿಮ ಹಂತದ ಅಧಿಸೂಚನೆ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

ಜಿಪಂ ಮತ್ತು ತಾಪಂ ಚುನಾವಣೆ ಪ್ರಕ್ರಿಯೆಯಲ್ಲಿ ಸರ್ಕಾರ ಹಾಗೂ ಚುನಾವಣಾ ಆಯೋಗದ ಜವಾಬ್ದಾರಿಗಳು ಪ್ರತ್ಯೇಕವಾಗಿವೆ. ಮೀಸಲಾತಿ ನಿಗದಿಪಡಿಸಿ ಪ್ರಕಟಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದರೆ, ಚುನಾವಣೆ ಘೋಷಣೆ ಮಾಡುವುದು, ವೇಳಾಪಟ್ಟಿ ಪ್ರಕಟಿಸುವುದು ಮತ್ತು ಮತದಾನ ಪ್ರಕ್ರಿಯೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ.

ಹೀಗಾಗಿ ಮೀಸಲಾತಿ ಅಧಿಸೂಚನೆ ಸೇರಿದಂತೆ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
13-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಪದೇ ಪದೇ ಮನೆಯಲ್ಲಿ ಹಣದ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರ ದಿನ ಹೊಸ್ತಲಿನ  ಮುಂದೆ ಸರಳ ಪ್ರಯೋಗ ಮಾಡಿ ..!-ಡಕ್ಕೆಯ ಬೊಮ್ಮಣ್ಣ ನವರ ವಚನ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಉದ್ಯೋಗದಲ್ಲಿ  ಅಭಿವೃದ್ಧಿಯಾಗಬೇಕಾ ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಪ್ರಯೋಜನ ಸಿಗಬೇಕೆಂದರೆ ಈ ತಂತ್ರವನ್ನು ಮಾಡಿ.!!!!!!!ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಗೆ ನಿಗದಿಪಡಿಸಿದ್ದ ಗಡುವು ನವೆಂಬರ್ 30 ಕ್ಕೆ ಕೊನೆಯ ದಿನಾಂಕ!ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಅಮೆಜಾನ್‌ನ ಸ್ಕಾಲರ್‌ಶಿಪ್ ವಿವರ.!ಕಾನೂನು ನೆರವಿನಿಂದ ಯಾರು ವಂಚಿತರಾಗಬಾರದು ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್.!ನ.20ರಂದು ಗ್ರಾಮ ಪಂಚಾಯಿತಿ ಕರವಸೂಲಿಗಾರ ಹುದ್ದೆಗೆ: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ..!ನೀರಾವರಿ ಈರುಳ್ಳಿ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ನವೆಂಬರ್ 30 ಕೊನೆಯ ದಿನ.!