ದಾವಣಗೆರೆ : ತಾಲ್ಲೂಕಿನ ಶಿಶು ಅಭಿವೃದ್ಧಿ 'ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆ ಗೌರವ ಸೇವೆಯ ಹುದ್ದೆಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 14 ರವರೆಗೆ. ಕೊನೆಯದಿನವಾಗಿರುತ್ತೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ ದುರ್ಗಾಂಭಿಕ ಶಾಲೆ ಎದುರು, ನಂದ ಗೋಕುಲ ಬಿಲ್ಡಿಂಗ್, ಸರಸ್ವತಿ ನಗರ, ದಾವಣಗೆರೆ ಇಲ್ಲಿಗೆ ಖುದ್ದಾಗಿ ಬಂದು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.