LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕುರುಬರ ಸಂಘದಿಂದ ಸಂಗೊಳ್ಳಿರಾಯಣ್ಣ ಜಯಂತಿ ಹಾಗೂ 80 ನೇ ಸ್ವಾತಂತ್ರ್ಯ ದಿನಾಚರಣೆ.!

ಕುರುಬರ ಸಂಘದಿಂದ ಸಂಗೊಳ್ಳಿರಾಯಣ್ಣ ಜಯಂತಿ ಹಾಗೂ 80 ನೇ ಸ್ವಾತಂತ್ರ್ಯ ದಿನಾಚರಣೆ.!

 

ಚಿತ್ರದುರ್ಗ : ಅಪ್ರತಿಮ ದೇಶ ಭಕ್ತ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಹಾಗೂ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕುರುಬರ ಸಂಘದ ವತಿಯಿಂದ ಶನಿವಾರ ಆಚರಿಸಲಾಯಿತು.

ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡುತ್ತ ಬ್ರಿಟೀಷರ ವಿರುದ್ದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರಲ್ಲಿ ಸಂಗೊಳ್ಳಿರಾಯಣ್ಣ ಮೇಲುಸ್ತರದಲ್ಲಿದ್ದಾರೆ. ಪರಂಗಿಯರ ಯಾವುದೇ ಗೊಡ್ಡು ಬೆದರಿಕೆಗೆ ಹೆದರದೆ ಕಿತ್ತೂರುರಾಣಿಚೆನ್ನಮ್ಮನ ಭಂಟನಾಗಿ ಗೆರಿಲ್ಲಾ ಯುದ್ದ ಮೊದಲು ಪ್ರಯೋಗಿಸಿದ ಮಹಾನ್ ಸೇನಾನಿ ದೇಶಭಕ್ತನನ್ನು ಸ್ಮರಿಸುವುದು ಅರ್ಥಪೂರ್ಣ ಎಂದು ಹೇಳಿದರು.

.15 ರಂದು ಜನಿಸಿದ ಸಂಗೊಳ್ಳಿ ರಾಯಣ್ಣ ಪ್ರಾಣತ್ಯಾಗ ಮಾಡಿದ್ದು, .26 ಗಣರಾಜ್ಯೋತ್ಸದಂದು. ಹಾಗಾಗಿ ಅಂದಿನ ದಿನವನ್ನು ಕರಾಳ ದಿನವನ್ನಾಗಿ ಆಚರಿಸಲಾಗುವುದೆಂದು ತಿಳಿಸಿದರು.

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಹೆಚ್.ಮಂಜಪ್ಪ, ಖಜಾಂಚಿ ಮೃತ್ಯುಂಜಯ, ಪ್ರಾಣೇಶ್, ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸಂಘದ ಅಧ್ಯಕ್ಷ ಆನಂದ್ ಇನ್ನು ಮುಂತಾದವರು ಸಂದರ್ಭದಲ್ಲಿ ಹಾಜರಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST