LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬ್ಯಾಂಕಿನವರು ಗ್ರಾಹಕರ ಜೊತೆ ಕನ್ನಡದಲ್ಲಿ ವ್ಯವಹರಿಸಿ ಸಚಿವ ಶಿವರಾಜ ತಂಗಡಗಿ

ಬ್ಯಾಂಕಿನವರು ಗ್ರಾಹಕರ ಜೊತೆ ಕನ್ನಡದಲ್ಲಿ ವ್ಯವಹರಿಸಿ ಸಚಿವ ಶಿವರಾಜ ತಂಗಡಗಿ

 

ಬೆಂಗಳೂರು : ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕಿಗೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಇದೆ. ಅದು ಕನ್ನಡಿಗರ ಭಾಷಾ ಹಕ್ಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕಿಗೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಇದೆ. ಅದು ಕನ್ನಡಿಗರ ಭಾಷಾ ಹಕ್ಕು ಈ ನಿಟ್ಟಿನಲ್ಲಿ ಸ್ಥಳೀಯ ಭಾಷೆ ಮಾತನಾಡಬಲ್ಲ ಅಧಿಕಾರಿಗಳನ್ನು ನೇಮಿಸಲು ಮುಂದಾಗಿರುವ ಬ್ಯಾಂಕ್ ಆಫ್ ಬರೋಡಾ  ಕ್ರಮ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ಹೋರಾಟ ನಡೆಸಿದ್ದ ಕನ್ನಡಪರ ಸಂಘಟನೆಗಳಿಗೆ ಹಾಗೂ ಧ್ವನ ಎತ್ತಿದ್ದ ಕನ್ನಡಿಗರಿಗೆ ಅಭಿನಂದನೆ ಸಲ್ಲಿಸುತ್ತೇನೆ.  ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಬ್ಯಾಂಕುಗಳು ಕನ್ನಡ ಬಲ್ಲ ಅಭ್ಯರ್ಥಿಗಳ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಸೂಕ್ತ ನಿಯಮ ರೂಪಿಸಬೇಕು ಒತ್ತಾಯಿಸಿದ್ದಾರೆ.

ಕನ್ನಡಿಗರು ತಮ್ಮದೇ ನೆಲದಲ್ಲಿ ಬ್ಯಾಂಕಿಂಗ್ ಸೇರಿದಂತೆ ಯಾವುದೇ ಸೇವೆ ಪಡೆಯುವಾಗ ಭಾಷೆಯ ಅಡೆತಡೆ ಎದುರಿಸಬಾರದು. ಕನ್ನಡದಲ್ಲಿ ಸೇವೆ ಪಡೆಯುವುದು ಕನ್ನಡಿಗರ ಹಕ್ಕು. ಅದನ್ನು ಖಾತ್ರಿಪಡಿಸುವುದು ಪ್ರತಿಯೊಂದು ಸಂಸ್ಥೆಯ ಕರ್ತವ್ಯ. ಇದು ಕೇವಲ ಉದ್ಯೋಗದ ಪ್ರಶ್ನೆಯಲ್ಲ, ಕನ್ನಡಿಗರ ಭಾಷಾ ಹಕ್ಕು ಮತ್ತು ಆತ್ಮಗೌರವದ ಪ್ರಶ್ನೆ. ಕರ್ನಾಟಕದಲ್ಲಿ ಸೇವೆ ನೀಡುವ ಸಂಸ್ಥೆಗಳಿಗೆ ಕನ್ನಡ ಗೊತ್ತಿರಬೇಕು. ಕರ್ನಾಟಕದಲ್ಲಿ ಉದ್ಯೋಗ ನೀಡುವಾಗ ಕನ್ನಡಕ್ಕೆ ಆದ್ಯತೆ ಇರಬೇಕು ಎಂದು ತಿಳಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್