CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಗ್ಗೆ ತಾಯಿ ಹೇಳಿದ ಮಾತು: ಅನಿತಾ ದೀಪ್ಕೆ
ದೆಹಲಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ತಾಯಿ ಅನಿತಾ ದೀಪ್ನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಅವನಿಗಿನ್ನೂ ಚಿಕ್ಕ ವಯಸ್ಸು. ಆದರೂ, ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ. ಈಗ ಅವನು ಸುರಕ್ಷಿತವಾಗಿ ಮನೆಗೆ ಬರಬೇಕು. ನನಗೆ ತುಂಬಾ ಸಂತೋಷವಾಗಿದೆ. ನನ್ನ ಮಗನ ಬಗ್ಗೆ ತುಂಬಾ ಹೆಮ್ಮೆ ಇದೆ.
ಕೊನೆಗೂ ಆತ ಅಂದುಕೊಂಡಿದ್ದನ್ನು ಸಾಧಿಸಿದ್ದಾನೆ. ಪ್ರತಿಭಟನೆಯ ದಿನಗಳಲ್ಲಿ ಅವನಿಗೆ ಏನಾಗುತ್ತೋ ಎಂಬ ಭಯ ನಮ್ಮನ್ನು ಕಾಡುತ್ತಿತ್ತು ಎಂದಿದ್ದಾರೆ.