LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

‘ಪದ್ಮಶ್ರೀ’ ಪುರಸ್ಕೃತ ನಟಿ ಸಾಹುಕಾರ್ ಜಾನಕಿ ವಿಧಿವಶ.!

‘ಪದ್ಮಶ್ರೀ’ ಪುರಸ್ಕೃತ ನಟಿ ಸಾಹುಕಾರ್ ಜಾನಕಿ ವಿಧಿವಶ.!

 

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

 ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸಾಹುಕಾರ್ ಜಾನಕಿ ಅವರನ್ನು ಚೆನ್ನೈನ ಆಳ್ವಾರ್‌ಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಮಧ್ಯಾಹ್ನ 1.59ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈನ ತೇನಾಂಪೇಟೆಯಲ್ಲಿರುವ ಸೇಂಟೋಫ್ ರಸ್ತೆಯ ನಿವಾಸದಲ್ಲಿ ಸಾಹುಕಾರ್ ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಇಂದು ಸಂಜೆ 5 ಗಂಟೆಯಿಂದ ಇರಿಸಲಾಗುವುದು ಎಂದು ನಾಸರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾಹುಕಾರ್ ಜಾನಕಿ ನಿಧನಕ್ಕೆ ಇಡೀ ದಕ್ಷಿಣ ಭಾರತ ಚಿತ್ರರಂಗ ಕಂಬನಿ ಮಿಡಿದಿದೆ.1950ರಲ್ಲಿ ಎಲ್.ವಿ. ಪ್ರಸಾದ್ ನಿರ್ದೇಶನದ ತೆಲುಗಿನ ‘ಸಾಹುಕಾರು’ ಚಿತ್ರದ ಮೂಲಕ ಜಾನಕಿ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಈ ಚಿತ್ರ ನೀಡಿದ ಅಭೂತಪೂರ್ವ ಯಶಸ್ಸಿನಿಂದಾಗಿ ಅವರ ಹೆಸರಿನ ಮುಂದೆ ‘ಸಾಹುಕಾರ್’ ಎಂಬ ಬಿರುದು ಖಾಯಂ ಆಯಿತು. 1952ರ ‘ವಳಯಾಪತಿ’ ಚಿತ್ರದ ಮೂಲಕ ಅವರು ತಮಿಳು ಚಿತ್ರರಂಗ ಪ್ರವೇಶಿಸಿದರು.

 ಕನ್ನಡ ಚಿತ್ರರಂಗಕ್ಕೂ ಸಾಹುಕಾರ್ ಜಾನಕಿ ಅವರ ಕೊಡುಗೆ ಅಪಾರ. 1954ರ ‘ದೇವಕನ್ನಿಕಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. 1959ರಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಭಿನಯಿಸಿದ ‘ಮಹಿಷಾಸುರ ಮರ್ದಿನಿ’ ಚಿತ್ರವು ಅವರಿಗೆ ಜನಪ್ರಿಯತೆಯನ್ನು ತಂದುಕೊಟ್ಟಿತು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ತಮ್ಮ ಅದ್ಭುತ ಅಭಿನಯದಿಂದ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದರು.

 ಸಾಹುಕಾರ್ ಜಾನಕಿ ಅವರ ಸುದೀರ್ಘ ಕಲಾ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ 2022ರಲ್ಲಿ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರು-ಶಿಷ್ಯ ಭಾಂದವ್ಯ ಸುಖಿ ಸಮಾಜದ ಹೆಗ್ಗುರುತು: ಎನ್.ಎಂ ರಮೇಶ್ಪ್ರೀತಿ-ಪ್ರೇಮ ವಿಚಾರದಲ್ಲಿ ಜಯ ಸಿದ್ಧಿ ಆಗಬೇಕಾದರೆ ಇದೊಂದು ತಂತ್ರ ಮಾಡಿಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು ಓದ ಬೇಕಾದ ಸುದ್ದಿ.!ಹೈಕೋರ್ಟ್‌ನಿಂದ ಮಹತ್ವದ ಆದೇಶ: ಸಾಲದ ಹಣ ಬಾಕಿ ಇದೆ ಎಂಬ ಕಾರಣಕ್ಕೆ ಗ್ರಾಹಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತಿಲ್ಲ..!ದಾವಣಗೆರೆ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ: ತೀವ್ರ ಮಳೆ  ಕೊರತೆ,  ಬೇಳೆ ಹಾನಿ ನಿಖರ ಅಂಶಗಳ ಮಾಹಿತಿ.!ವಿವಿಧ ಹೋಟೆಲ್, ಜ್ಯೂಸ್ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ..!ಕೇಂದ್ರ ಬರ ಅಧ್ಯಯನ ತಂಡ ಭೇಟಿ : ಭೀಕರ ಕ್ಷಾಮದ ದರ್ಶನ..!ವಚನ: -ಷಣ್ಮುಖಸ್ವಾಮಿದಿನದ ಮಂಡಕ್ಕಿ ಒಗ್ಗಣೆ ಮಿರ್ಚಿ 04-10-2026ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ.!