LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶ: ಆನ್‌ಲೈನ್ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶ: ಆನ್‌ಲೈನ್ ಅರ್ಜಿ ಆಹ್ವಾನ

ದಾವಣಗೆರೆ: 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.  ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ  2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್‌  https://swd.karnataka.gov.in/ ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರೋತ್ಸಾಹಧನ: 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿರಬೇಕು.

ಅರ್ಜಿಯ ಪ್ರತಿಯೊಂದಿಗೆ ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‌ಬುಕ್ ಹಾಗೂ ಆಧಾರ್ ಕಾರ್ಡ್‌ಗಳ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.

ವಿದ್ಯಾರ್ಥಿನಿಲಯಗಳಿಗೆ ಪ್ರವೇಶ: 2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾವಣಗೆರೆ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್  https://swd.karnataka.gov.in/ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್‌ ತಿಳಿಸಿದ್ದಾರೆ.

(AI ಚಿತ್ರ)

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?