LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನ.21 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಹಿರಿಯೂರಿನಲ್ಲಿ ಪ್ರಜಾಸೇವಾ ಆಂದೋಲನ

ನ.21 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಹಿರಿಯೂರಿನಲ್ಲಿ ಪ್ರಜಾಸೇವಾ ಆಂದೋಲನ

 

ಚಿತ್ರದುರ್ಗ: ಹಿರಿಯೂರಿನಲ್ಲಿ ಇದೇ ನ.21 ರಂದು ಶನಿವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಜರುಗಲಿದೆ. ಇದಕ್ಕೂ ಮುನ್ನವೇ ಅರ್ಜಿ ನಮೂನೆಗಳನ್ನು ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ಹಂಚಿಕೆ ಮಾಡಿ, ಸ್ವೀಕೃತವಾಗುವ ಅರ್ಜಿಗಳ ವಿಲೇವಾರಿ ಪ್ರಯತ್ನಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸೂಚಿಸಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆಯ ನಡೆಸಿ ಅವರು ಮಾತನಾಡಿದರು.

ಹಿರಿಯೂರು ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಪ್ರಜಾಸೇವಾ ಆಂದೋಲನ ಹಮ್ಮಕೊಂಡಿರುವ ಕುರಿತು, ಡಂಗೂರ ಸಾರುವ ಮೂಲಕ ಜನರಗೆ ಪ್ರಚುರ ಪಡಿಸಬೇಕು. ಈ ಹಿಂದೆ ಹಿರಿಯೂರಿನಲ್ಲಿ ಸೆ.5 ರಂದು ಪ್ರಜಾಸೇವಾ ಆಂದೋಲನೆ ಚಾಲನೆ ನೀಡುವುದರೊಂದಿಗೆ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಹೀಗೆ ಸ್ವೀಕೃತವಾಗಿದ್ದ ಅರ್ಜಿಗಳ ಪೈಕಿ ಎಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಯಾವ ಅರ್ಜಿಗಳ ವಿಲೇವಾರಿ ತಡವಾಗಿದೆ. ಅದಕ್ಕೆ ಕಾರಣವೇನು ಎಂಬುದನ್ನು ಪಟ್ಟಿ ಮಾಡಿ ಮಾಹಿತಿ ಒದಗಿಸಬೇಕು. ಈಗಾಗಲೇ ಪ್ರಜಾಸೇವಾ ಆಂದೋಲನ ಸೇರಿದಂತೆ, ಐ.ಪಿ.ಜಿ.ಆರ್.ಎಸ್. ಪೋರ್ಟ್ಲ್‌ನಲ್ಲಿ ಸ್ವೀಕೃತವಾಗಿರುವ ಅರ್ಜಿಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಹಂತದಲ್ಲೇ ಪರಿಹಾರ ಒದಗಬಹುದಾದರೆ, ಕೂಡಲೇ ಅಧಿಕಾರಿಗಳು ಸ್ಪಂದಿಸಿ ಜನರ ಕೆಲಸ ಮಾಡಿಕೊಡಬೇಕು.

 ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ಪ್ರಜಾಸೇವಾ ಆಂದೋಲನದ ಹಿನ್ನಲೆಯಲ್ಲಿ ಹಿರಿಯೂರು ತಾಲ್ಲೂಕಿನ ಎಲ್ಲ ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ, ಅರ್ಜಿಗಳನ್ನು ವಿತರಿಸಿ, ಮರಳಿ ಅರ್ಜಿಗಳನ್ನು ಸ್ವೀಕರಿಸುವ ಕೆಲಸವಾಗಬೇಕು. ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಸಾರ್ವಜನಿಕರಿಗೆ ನೆರಳು ಹಾಗೂ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಸ್ಥಳದಲ್ಲಿ ಇಲಾಖೆವಾರು ಕೌಂಟರ್ ತೆರೆಯಬೇಕು. ಬರಗಾಲದ ಹಿನ್ನಲೆಯಲ್ಲಿ ಸಾಕಷ್ಟು ಜನರು ಕುಡಿಯುವ ನೀರಿನ ಸಮಸ್ಯೆ ಹೊತ್ತು ಬರುತ್ತಾರೆ. ಇದರೊಂದಿಗೆ ಕಂದಾಯ ಇಲಾಖೆಗೆ ಸಂಬAಧಿಸಿದ ಅರ್ಜಿಗಳು ಸಲ್ಲಿಕೆಯಾಗುತ್ತವೆ. ಅಧಿಕಾರಿಗಳು ಇದಕ್ಕೆ ಸಿದ್ದರಿದ್ದು, ತತಕ್ಷಣವೇ ಪರಿಹಾರ ನೀಡಬೇಕು ಎಂದು ಸಚಿವ ಟಿ.ರಘುಮೂರ್ತಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿ.ಪಂ.ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಜಿ.ಪಂ.ಉಪಕಾರ್ಯದರ್ಶಿ ಬಾಬು, ಸಿಪಿಓ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಹಿರಿಯೂರು ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಮಾಚಾರಕ್ಕೆ ಮಾಟ ಮಂತ್ರ ದೂಷಕ್ಕೆ ಶತ್ರು ದೃಷ್ಟಿಗೆ ಜನ ದೃಷ್ಟಿಗೆ ದೃಷ್ಟಿಯಿಂದ ಈ ಶಕ್ತಿಶಾಲಿ ಯಂತ್ರವನ್ನು ಧಾರಣೆ ಮಾಡಿ! ತುರುವನೂರು : ಡಿ.03 ಮತ್ತು 04ರಂದು ಮಾರಮ್ಮ ದೇವಿಯ ದೇವಸ್ಥಾನ ಉದ್ಘಾಟನೆ ಹಾಗೂ ವಿಗ್ರಹ ಪ್ರತಿಷ್ಠಾಪನೆನ.21 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಹಿರಿಯೂರಿನಲ್ಲಿ ಪ್ರಜಾಸೇವಾ ಆಂದೋಲನಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿಗೆ ರಾಜ್ಯ ಸರ್ಕಾರ ಟೆಂಡರ್ ಗೆ ವಿರೋಧ: ಪ್ರಭಂಜನ್ಬಿಹೆಚ್‍ಇಎಲ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಇಂದು ನ.17 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಬಾಹೂರ ಬೊಮ್ಮಣ್ಣ ಅವರ ವಚನ.ಕೆ ಎಸ್ ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್.!ಇವತ್ತಿಗೆ ರಾಮಾಯಣ ಚಿತ್ರ ಕಲೆಕ್ಷನ್ ಎಷ್ಟುಕೋಟಿ.!?ವಿರಾಟ್ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧದ ಬ್ಯಾಟಿಂಗ್‌ನಲ್ಲಿ ಎಷ್ಟು ರನ್.!