LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶೀಘ್ರ ಜಿಲ್ಲೆಯ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ

ಶೀಘ್ರ ಜಿಲ್ಲೆಯ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು 33 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಮುಂದಿನ 8 ರಿಂದ 9 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರದ ರೈಲ್ವೇ ನಿಲ್ದಾಣದ ಹತ್ತಿರದ ಲೆವೆಲ್ ಕ್ರಾಸಿಂಗ್ ಸಂಖ್ಯೆ 22 ಬದಲಾಗಿ ನಿರ್ಮಿಸಲಾಗುತ್ತಿರುವ ನೂತನ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಲದ ಅಭಿವೃದ್ಧಿ ಬೆನ್ನೆಲುಬಾಗಿವೆ. ವಿಶ್ವದ ಭೂಪಟದಲ್ಲಿ ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಲು ಸಾರಿಗೆ ಮೂಲಸೌಕರ್ಯಗಳಿಗೆ ಅತ್ಯಂತ ಹೆಚ್ಛಿನ ಆದ್ಯತೆ ನೀಡಲಾಗುತ್ತಿದೆ. ದೇಶಾದ್ಯಂತ ರೈಲ್ವೆ ವಿದ್ಯುದ್ದೀಕರಣ ಶೇ.99ರಷ್ಟು ಪೂರ್ಣಗೊಂಡಿದ್ದು, ವರ್ಷದ ಕೊನೆಯೊಳಗೆ ಶೇ.100ರಷ್ಟು ಸಾಧಿಸಿ ವಿಶ್ವ ದಾಖಲೆ ಬರೆಯಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಕಾರ್ಯ 2 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಕರ್ನಾಟಕ ಶೇ.100ರಷ್ಟು ರೈಲ್ವೆ ವಿದ್ಯುದ್ದೀಕರಣ ಸಾಧಿಸಿದ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಸರ್ಕಾರಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಸಂಸದರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿ ಪ್ರಮುಖ ಸೇತುವೆಗಳು, ಎಲ್ಸಿ ಗೇಟ್ಗಳ ಮೇಲ್ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ಈಲ್ಲೆಯ ಬಹುವರ್ಷಗಳ ಕನಸಿನ ಯೋಜನೆಯಾದ ತುಮಕೂರು - ಚಿತ್ರದುರ್ಗ - ದಾವಣಗೆರೆ ನೂತನ ನೇರ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಶೇ. 92 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಬಾಕಿ ಇರುವ ಶೇ.8 ರಷ್ಟು ಜಮೀನನ್ನು ಜಿಲ್ಲಾಡಳಿತ ಶೀಘ್ರವೇ ಹಸ್ತಾಂತರಿಸಿದರೆ, ಮುಂದಿನ ಒಂದೂವರೆ ವರ್ಷದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಇದಲ್ಲದೆಅಮೃತ್ ಭಾರತ್ ಸ್ಟೇಷನ್' ಯೋಜನೆಯಡಿ ಚಿತ್ರದುರ್ಗ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ. ತುಮಕೂರುರಾಯದುರ್ಗ ಹಾಗೂ ಚಿತ್ರದುರ್ಗ ಭಾಗದ ಪ್ರಮುಖ ರೈಲು ಮಾರ್ಗಗಳ ಕಾಮಗಾರಿಗಳನ್ನು ವೇಗಗೊಳಿಸಲಾಗಿದ್ದು, 2027 ಡಿಸೆಂಬರ್ ಅಂತ್ಯದ ವೇಳೆಗೆ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್