ಬೆಂಗಳೂರು: ರಾಮಾಯಣ ಸಿನಿಮಾ ಇಂದು ಅದ್ದೂರಿಯಾಗಿ ತೆರೆಕಂಡಿದೆ. ನಟ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಕಾಂಬಿನೇಷನ್‌ನ ಈ ಸಿನಿಮಾ ಮೊದಲ ದಿನವೇ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಸೂಚನೆ ನೀಡಿದೆ.
ಚಿತ್ರದಲ್ಲಿ ರಣಬೀರ್ ಪ್ರಭು ಶ್ರೀರಾಮನ ಪಾತ್ರದಲ್ಲಿ ಕಂಗೊಳಿಸಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಮನಮುಟ್ಟುವಂತೆ ಅಭಿನಯಿಸಿದ್ದಾರೆ.
ಇನ್ನು ಲಂಕೇಶ್ವರ ರಾವಣನ ಖಡಕ್ ಅವತಾರದಲ್ಲಿ ಕಾಣಿಸಿಕೊಂಡಿರುವ ನಟ ಯಶ್ ಅವರ ಅಭಿನಯ ಹಾಗೂ ಸ್ಟ್ರೀನ್ ಪ್ರೆಸೆನ್ಸ್‌ಗೆ ಪ್ರೇಕ್ಷಕರು ಜೈಕಾರ ಹಾಕಿದ್ದಾರೆ.