LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸೆ. 28 ರಂದು ಕೋಮುವಾದಿ ಬಿಜೆಪಿ. ಎಸ್.ಐ.ಆರ್. ವಿರುದ್ಧ ಪ್ರತಿಭನೆ

ಸೆ. 28 ರಂದು ಬೆಳಿಗ್ಗೆ ಕೋಮುವಾದಿ ಬಿಜೆಪಿ. ಎಸ್.ಐ.ಆರ್. ವಿರುದ್ಧ ಪ್ರತಿಭನೆ

 

ಚಿತ್ರದುರ್ಗ : ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ಮತ ಹಾಕಿಸಿಕೊಳ್ಳುತ್ತಿರುವ ಕೋಮುವಾದಿ ಬಿಜೆಪಿ. ಎಸ್.ಐ.ಆರ್.ಮೂಲಕ ಅರ್ಹ ಮತದಾರರನ್ನು ಮತಪಟ್ಟಿಯಿಂದ ಕಿತ್ತು ಹಾಕುತ್ತಿರುವುದರ ವಿರುದ್ದ ಜನರನ್ನು ಜಾಗೃತಿಗೊಳಿಸುವುದಕ್ಕಾಗಿ ಸೆ. 28 ರಂದು ಬೆಳಿಗ್ಗೆ 11 ಕ್ಕೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಎಸ್.ಐ.ಆರ್.ಮೂಲಕ ಬಿಜೆಪಿ. ಓಟ್ ಚೋರಿ ಮಾಡುತ್ತಿದೆ. ಇಡಿ, ಸಿಬಿಐ. ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಿಜೆಪಿ. ಸರ್ಕಾರ ತನಗೆ ಬಾರದ ಮತಗಳನ್ನು ಗುರುತಿಸಿ ಮತ ಪಟ್ಟಿಯಿಂದ ತೆಗದು ಹಾಕುವ ಕುತಂತ್ರ ನಡೆಸುತ್ತಿದೆ. ಇಂತಹ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಯುವ ನಾಯಕ ಭವಿಷ್ಯದ ಪ್ರಧಾನಿ ರಾಹುಲ್ಗಾಂಧಿ ಧ್ವನಿಎತ್ತಿದ್ದು, ಸತ್ಯ ಎನ್ನುವುದು ದೇಶದ ಜನರಿಗೆ ಅರಿವಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ಮುಖಂಡರುಗಳು ಪ್ರತಿಭಟನೆ ನಡೆಸುತ್ತಿದ್ದಾರೆಂದು ಹೇಳಿದರು.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ಕುಮಾರ್ರವರ ಪದಚ್ಯುತಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಮತದಾನ ಮುಖ್ಯ ಎನ್ನುವ ಜಾಗೃತಿಯನ್ನು ಪ್ರತಿಭಟನೆ ಮೂಲಕ ಜನಸಾಮಾನ್ಯರಿಗೆ ಮೂಡಿಸಲಾಗುತ್ತದೆ. ಭಾರತದಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷ ಮತದಾರರು ಆತಂಕದಲ್ಲಿದ್ದಾರೆ. ಪ್ರತಿಯೊಬ್ಬರು ಮತದಾನದ ಹಕ್ಕನ್ನು ಉಳಿಸಿಕೊಳ್ಳಲಿ ಎನ್ನುವುದು ನಮ್ಮ ಉದ್ದೇಶ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದೆ. ಕೇಂದ್ರದಲ್ಲಿ ಅಧಿಕಾರ ಚಲಾಯಿಸುತ್ತಿರುವ ಬಿಜೆಪಿ. ಎಸ್.ಐ.ಆರ್.ಮೂಲಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಸಿಯುತ್ತಿದೆ. ನೈಜ ಮತದಾರರು ಪಟ್ಟಿಯಲ್ಲಿ ನಮ್ಮ ಹೆಸರು ಸೇರಿಸಿ ಎಂದು ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ರಾಷ್ಟ್ರದಲ್ಲಿ ಎನ್ಯುಮರೇಷನ್ ಫಾರಂಗಳನ್ನು ಸಲ್ಲಿಸಿ ಮತಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಅರ್ಹ ಮತದಾರರು ಪರದಾಡುವಂತಾಗಿದೆ ಎಂದು ದೂರಿದರು.

ಫಾರಂ ನಂ.7 ರಲ್ಲಿ ಸಹಿ ಇಲ್ಲದೆ ಫಾರಂಗಳನ್ನು ಭರ್ತಿ ಮಾಡಿ ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡುವಂತೆ ಬಿಜೆಪಿ.ಯವರು ಸಂಚು ನಡೆಸುತ್ತಿದ್ದಾರೆ. ಯಾರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂದು ಜಾಗೃತಿ ಮೂಡಿಸುವುದಕ್ಕಾಗಿ ಸೆ.28 ರಂದು ಬೆಳಿಗ್ಗೆ 11 ಕ್ಕೆ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ ಹೊರಟು ಅಂಬೇಡ್ಕರ್ ವೃತ್ತದ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಲಿದೆ. ಎಲ್ಲಾ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು, ಸಾಮಾಜಿಕ ನ್ಯಾಯ, ಸಂವಿಧಾನದ ಪರವಾಗಿರುವವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ ಎಂ.ಕೆ.ತಾಜ್ಪೀರ್ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ಕುಮಾರ್ ಮೇಲೆ ಎಫ್.ಐ.ಆರ್.ದಾಖಲಿಸಿ ಪದಚ್ಯುತಿಗೊಳಿಸುವಂತೆ ಆಗ್ರಹಿಸಿದರು.

ಕಂಠೀರವ ಸ್ಟುಡಿಯೋ ಅಧ್ಯಕ್ಷ ಮೆಹಬೂಬ್ಪಾಷ ಮಾತನಾಡುತ್ತ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದಾರೆ. ಕೇಂದ್ರ ಸರ್ಕಾರ ಎಸ್.ಐ.ಆರ್.ಮೂಲಕ ನಿಜವಾದ ಮತದಾರರನ್ನು ಮತಪಟ್ಟಿಯಿಂದ ತೆಗೆದು ಹಾಕುವ ಸಂಚು ನಡೆಸುತ್ತಿದೆ. ಇದರ ವಿರುದ್ದ ಪ್ರತಿಯೊಬ್ಬರು ಜಾಗೃತರಾಗಬೇಕೆಂದು ವಿನಂತಿಸಿದರು.

ಎಸ್.ಐ.ಆರ್. ದುರ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರ ಮತದಾನದ ಮಹತ್ವವನ್ನು ಬುಡಮೇಲು ಮಾಡುತ್ತಿದೆ. ಪಶ್ಚಿಮ ಬಂಗಾಳದಲ್ಲಿ 85 ಲಕ್ಷ ಮತದಾರರನ್ನು ಮತ ಪಟ್ಟಿಯಿಂದ ತೆಗೆದು ಹಾಕಿ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದಂತೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆ. ಯಾರ ಹಿಡಿತದಲ್ಲಿಯೂ ಇರಬಾರದು. ಎಲ್ಲರಿಗೂ ಸಮಾನತೆ ಸಿಕ್ಕಿರುವುದು ಕಾಂಗ್ರೆಸ್ನಲ್ಲಿ ಮಾತ್ರ. ಎಸ್.ಐ.ಆರ್.ಮೂಲಕ ಮತದಾನದ ಹಕ್ಕು ಕಿತ್ತುಕೊಳ್ಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾಧಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ, ಸುರೇಶ್ನಾಯ್ಕ, ಹೆಚ್.ಅಂಜಿನಪ್ಪ, ಮುದಾಸಿರ್ ನವಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST