LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಲಂಚ ಕೇಳಿದ ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಲಂಚ ಕೇಳಿದ ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

 

ನವದೆಹಲಿ: ಲಂಚ ಕೇಳಿದ ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ, ವಿಚಾರಣೆಗೆ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಕುರಿತು ಮಹತ್ವದ ತೀರ್ಪು ನೀಡಿರುವ ಉನ್ನತ ನ್ಯಾಯಾಲಯ ಕರ್ತವ್ಯದ ಭಾಗವಲ್ಲದ ಲಂಚದ ಬೇಡಿಕೆಗೆ ವಿಶೇಷ ರಕ್ಷಣೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಎದುರಿಸುತ್ತಿರುವ ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ ನಡೆಸಲು ಅಥವಾ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಉನ್ನತ ಅಧಿಕಾರಿಗಳ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ನೌಕರರು ತಮ್ಮ ಅಧಿಕೃತ ಕರ್ತವ್ಯ ನಿರ್ವಹಿಸುವಾಗ ತೆಗೆದುಕೊಳ್ಳುವ ನಿರ್ಧಾರಗಳು ಅಥವಾ ನೀಡುವ ಶಿಫಾರಸುಗಳಿಗೆ ಸಂಬಂಧಿಸಿದಂತೆ ಅನಗತ್ಯ ಕಿರುಕುಳದಿಂದ ರಕ್ಷಣೆ ಒದಗಿಸುವುದೇ ಕಾನೂನಿನ ಉದ್ದೇಶವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಎಸ್.ವಿ.ಎನ್. ಭಟ್ಟಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 17ಎ ಅನ್ನು ವ್ಯಾಖ್ಯಾನಿಸುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಲಂಚ ಕೇಳುವುದು ಅಧಿಕೃತ ಕರ್ತವ್ಯದ ಭಾಗವಲ್ಲ

ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುವಾಗ ತೆಗೆದುಕೊಳ್ಳುವ ನಿರ್ಧಾರಗಳು ಅಥವಾ ಶಿಫಾರಸುಗಳಿಗೆ ಸಂಬಂಧಿಸಿದ ಆರೋಪಗಳ ತನಿಖೆಗೆ ಕೆಲವು ಸಂದರ್ಭಗಳಲ್ಲಿ ಪೂರ್ವಾನುಮತಿ ಅಗತ್ಯವಾಗಬಹುದು. ಆದರೆ ಲಂಚ ಕೇಳುವುದು ಅಧಿಕೃತ ಕರ್ತವ್ಯದ ಭಾಗವಲ್ಲದ ಅಪರಾಧ ಕೃತ್ಯವಾಗಿರುವುದರಿಂದ, ಅದಕ್ಕೆ ಸೆಕ್ಷನ್ 17ಎ ಅಡಿಯಲ್ಲಿ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಲಂಚದ ಬೇಡಿಕೆಯನ್ನು ಸರ್ಕಾರಿ ನೌಕರನ ಅಧಿಕೃತ ನಿರ್ಧಾರ ಅಥವಾ ಶಿಫಾರಸಿನೊಂದಿಗೆ ಸಮೀಕರಿಸಲಾಗದು ಎಂಬುದು ನ್ಯಾಯಾಲಯದ ನಿಲುವಾಗಿದೆ. ಹೀಗಾಗಿ, ಲಂಚ ಕೇಳಿದ ಆರೋಪದ ತನಿಖೆ ಆರಂಭಿಸಲು ಪೂರ್ವಾನುಮತಿ ಪಡೆಯದಿರುವ ಕಾರಣಕ್ಕೆ ಮಾತ್ರ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗದು ಎಂದು ಪೀಠ ತಿಳಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
13-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಪದೇ ಪದೇ ಮನೆಯಲ್ಲಿ ಹಣದ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರ ದಿನ ಹೊಸ್ತಲಿನ  ಮುಂದೆ ಸರಳ ಪ್ರಯೋಗ ಮಾಡಿ ..!-ಡಕ್ಕೆಯ ಬೊಮ್ಮಣ್ಣ ನವರ ವಚನ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಉದ್ಯೋಗದಲ್ಲಿ  ಅಭಿವೃದ್ಧಿಯಾಗಬೇಕಾ ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಪ್ರಯೋಜನ ಸಿಗಬೇಕೆಂದರೆ ಈ ತಂತ್ರವನ್ನು ಮಾಡಿ.!!!!!!!ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಗೆ ನಿಗದಿಪಡಿಸಿದ್ದ ಗಡುವು ನವೆಂಬರ್ 30 ಕ್ಕೆ ಕೊನೆಯ ದಿನಾಂಕ!ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಅಮೆಜಾನ್‌ನ ಸ್ಕಾಲರ್‌ಶಿಪ್ ವಿವರ.!ಕಾನೂನು ನೆರವಿನಿಂದ ಯಾರು ವಂಚಿತರಾಗಬಾರದು ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್.!ನ.20ರಂದು ಗ್ರಾಮ ಪಂಚಾಯಿತಿ ಕರವಸೂಲಿಗಾರ ಹುದ್ದೆಗೆ: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ..!ನೀರಾವರಿ ಈರುಳ್ಳಿ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ನವೆಂಬರ್ 30 ಕೊನೆಯ ದಿನ.!