LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ: ಸಚಿವ ರಘುಮೂರ್ತಿ ಸೂಚನೆ..!

ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ ಸಚಿವ ರಘುಮೂರ್ತಿ ಸೂಚನೆ..!

ಚಿತ್ರದುರ್ಗ: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ನೇರವಾಗಿ ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ  ವಿಳಂಬವಾಗಬಾರದು ಎಂಬುದನ್ನು ಸಚಿವರು ಸಭೆಯಲ್ಲಿ ಸ್ಪಷ್ಟಪಡಿಸಿದರು.

ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅವುಗಳ ಅನುಷ್ಠಾನದಲ್ಲಿ  ಸಮನ್ವಯ ಮತ್ತು ವೇಗ ಅಗತ್ಯಎಂದು ಹೇಳಿದರು

ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್ ಸಿ: ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ..!ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ: ಸಚಿವ ರಘುಮೂರ್ತಿ ಸೂಚನೆ..!ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಇಡಿ ಶಾಕ್.!  13 ಸ್ಥಳಗಳಲ್ಲಿ ದಾಳಿಮಾಟ ಮಂತ್ರ ಪ್ರಯೋಗವಾಗಿದ್ದರೆ ಪಲ್ಲಿ ಹಾಗೂ ಬೆಕ್ಕಿನಿಂದ ಸಿಗುತ್ತವೆ ಈ ಸೂಚನೆಗಳು.!ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ.!ಕನಿಷ್ಟ ವೇತನಕ್ಕೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ.!ರಾಮಲೀಲ ಮೈದಾನದಲ್ಲಿ ಎಐಸಿಸಿ. ಅಧ್ಯಕ್ಷ ಮಲ್ಲಿಕಾರ್ಜುನ ಭಾಷಣ: ಶ್ರೀರಾಮಸೇನೆಯಿಂದ ಜಾಗ ಶುದ್ದಿಕರಣ ಖಂಡಿಸಿ ಪ್ರತಿಭಟನೆಶಾಸಕ ಎನ್.ವೈ.ಗೋಪಾಲಕೃಷ್ಣಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸುವ ಹೇಳಿಕೆ ಖಂಡಿಸಿ ಪ್ರತಿಭಟನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 18-0-2026-ನೀಲಮ್ಮ  ಅವರ ವಚನ.!