ಬೆಂಗಳೂರು; ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ, ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇದರೊಂದಿಗೆ ರಾಜ್ಯ ಸಂಪುಟದ ಹೊಸ ಸಚಿವರಿಗೆ ಖಾತೆ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಎಂಬ ಹಲವು ಗೊಂದಲಗಳಿಗೆ ಇದೀಗ ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಹೀಗಾಗಿ, ರಾಜ್ಯದ ಯಾವ ಸಚಿವರಿಗೆ ಯಾವ ಖಾತೆ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.