ಚಿತ್ರದುರ್ಗ : ಸೂರ್ಯಕಾಂತಿ ಖರೀಧಿ ಕೇಂದ್ರ ತೆರೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘದದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯಲ್ಲಿ ಎಕರೆಗೆ 70-80 ಕೆ.ಜಿ.ಯಷ್ಟು ಸೂರ್ಯಕಾಂತಿ ಬೆಳೆ ಬಂದಿದ್ದು, ಕೇಂದ್ರ ಸರ್ಕಾರ ಕ್ವಿಂಟಾಲ್ಗೆ 8343 ರೂ. ಬೆಂಬಲ ಬೆಲೆ ಘೋಷಿಸಿರುವುದರಿಂದ ಕೂಡಲೆ ಖರೀಧಿ ಕೇಂದ್ರ ತೆರೆದು ಜಿಲ್ಲೆಯಲ್ಲಿ ಬೆಳೆಯುವ ಎಲ್ಲಾ ಬೆಳೆಗಳಿಗೂ ಬೆಳೆವಿಮೆ ಹಾಗೂ ಒಂದು ಎಕರೆಗೆ 25 ಸಾವಿರ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ ತೀವ್ರ ಬರಗಾಲ ತಲೆದೋರಿರುವುದರಿಂದ ಬ್ಯಾಂಕ್ಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಿ ಮುಂದಿನ ಬೆಳೆಗೆ ಹೊಸ ಸಾಲ ನೀಡಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಇ.ವಿ.ಶಶಿಧರರೆಡ್ಡಿ, ಹನುಮಂತರೆಡ್ಡಿ, ಡಿ.ಹೆಚ್.ರಾಮರೆಡ್ಡಿ, ಎ.ತಿಪ್ಪೇಸ್ವಾಮಿ ಮಲ್ಲಾಪುರ
ಕಿರಣ್, ಕೆ.ಟಿ.ಹನುಮಂತರೆಡ್ಡಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.