ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ
ಎನ್ನನೇಕೆ ನೋಡುವಿರಿ ಎಲೆ ಅಣ್ಣಗಳಿರಾ ?
ಕುಲವಳಿದು ಛಲವಳಿದು ಭವಗೆಟ್ಟು ಭಕ್ತೆಯಾದವಳ,
ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ ? ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು ಛಲವಳಿದವಳನು.
-ಅಕ್ಕಮಹಾದೇವಿ