ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನಾನೇಕೆ ಬಂದೆ ಸುಖವ ಬಿಟ್ಟು ?
ಬಂದುದಕ್ಕೆ ಒಂದೂ ಆದುದಿಲ್ಲ.
ಸಂಸಾರದಲ್ಲಿ ಸುಖಿಯಲ್ಲ, ಪರಮಾರ್ಥದಲ್ಲಿ ಪರಿಣಾಮಿಯಲ್ಲ.
ಸಿಕ್ಕಿದೆ ಅರ್ತಿಗಾರಿಕೆಯೆಂಬ ಭಕ್ತಿಯಲ್ಲಿ.
ದಾಸಿಯ ಕೂಸಿನಂತೆ ಒಡವೆಗಾಸೆಮಾಡಿ,
ಗಾಸಿಯಾದೆ ಮನೆಯೊಡೆಯನ ಕೈಯಲ್ಲಿ.
ಈ ಭಾಷೆ ಇನ್ನೇಸು ಕಾಲ, ನಿಃಕಳಂಕ ಮಲ್ಲಿಕಾರ್ಜುನಾ ?
-ಮೋಳಿಗೆ ಮಾರಯ್ಯ