ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಚಳಿಗಾಲದ ಅಧಿವೇಶನ.!
Also read
ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ನವೆಂಬರ್ 30ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸತತ ಎರಡು ವಾರಗಳ ಕಾಲ ನಡೆಯಲಿದೆ ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ಮುಂದಾಗಿದೆ. ನವೆಂಬರ್ 30ರಿಂದ ಆರಂಭವಾಗುವ ಅಧಿವೇಶನ ಡಿಸೆಂಬರ್ 11ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳು ಜರುಗಲಿವೆ.