LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹೌದು ನಾನು ‘ಬೌದ್ಧಿಕ ನಕ್ಸಲ್’.! ನಟ ನಾಸಿರುದ್ದೀನ್ ಶಾ

ಹೌದು ನಾನು ‘ಬೌದ್ಧಿಕ ನಕ್ಸಲ್’.! ನಟ ನಾಸಿರುದ್ದೀನ್ ಶಾ

 

 

ನವದೆಹಲಿ: ಹಿರಿಯ ಬಾಲಿವುಡ್ ನಟ ನಾಸಿರುದ್ದೀನ್ ಶಾ ಅವರು ತಮ್ಮನ್ನು ‘ಬೌದ್ಧಿಕ ನಕ್ಸಲ್’ ಎಂದು ಕರೆದುಕೊಂಡಿರುವ ಅವರು, ಕೇಂದ್ರ ಸರ್ಕಾರವನ್ನು ‘ತುಕ್ಡೆ-ತುಕ್ಡೆ ಗ್ಯಾಂಗ್’ ಎಂದು ಟೀಕಿಸಿ ರಾಜಕೀಯ ವಲಯದಲ್ಲಿ ಚರ್ಚೆಗೆ ಮುಂದಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಮಾತನಾಡಿರುವ ಶಾ, ಸರ್ಕಾರದ ಟೀಕಾಕಾರರಿಗೆ ‘ರಾಷ್ಟ್ರವಿರೋಧಿ’ ಮತ್ತು ‘ತುಕ್ಡೆ-ತುಕ್ಡೆ ಗ್ಯಾಂಗ್’ ಎಂಬ ಹಣೆಪಟ್ಟಿ ಹಚ್ಚುವ ಪ್ರವೃತ್ತಿಯನ್ನು ಪ್ರಶ್ನಿಸಿದ್ದಾರೆ. ಇಂತಹ ಆರೋಪಗಳನ್ನು ತಮ್ಮ ಮೇಲೆಯೂ ಹೊರಿಸಲಾಗುತ್ತಿದೆ ಎಂದು ಹೇಳಿರುವ ಅವರು, ಇದೇ ಪದಗಳನ್ನು ಸರ್ಕಾರದ ವಿರುದ್ಧ ತಿರುಗಿಸಿ ವಾಗ್ದಾಳಿ ನಡೆಸಿದ್ದಾರೆ.

 ತೀವ್ರ ಆಕ್ರೋಶ ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮೇಲಿನ ದಬ್ಬಾಳಿಕೆ ಮತ್ತು ಭಿನ್ನಾಭಿಪ್ರಾಯದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳ ವಿರುದ್ಧ ವ್ಯಕ್ತಪಡಿಸಿದ್ದಾರೆ.

ದೇಶದ ಯುವಜನರ ಚೈತನ್ಯವನ್ನು ಕುಗ್ಗಿಸುವುದು, ಶಿಕ್ಷಣ ಸಂಸ್ಥೆಗಳನ್ನು ದುರ್ಬಲಗೊಳಿಸುವುದು ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಅಧಿಕಾರದಲ್ಲಿರುವವರು ಮತ್ತು ಅವರ ಬೆಂಬಲಿಗರು ಟೀಕಾಕಾರರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಅವರ ಆರೋಪವಾಗಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST