ಮಂಗಳೂರು: ಸಂಘ ಪರಿವಾರದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮೇ 1ರಂದು ಸಂಜೆ ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯವು ಈ ಪ್ರಕರಣ ಎನ್ಐಎ ತನಿಖೆಗೆ ವಹಿಸಿ ಜೂನ್ 7ರಂದು ಆದೇಶ ಹೊರಡಿಸಿದೆ. ಎನ್‌ಐಎ ದಾಳಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.