ಪಾಟ್ನಾ : 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಬಿಹಾರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಂದ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಎನ್‌ಡಿಎ ಆಡಳಿತ ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದರು.
ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸೇರಿದಂತೆ ಹತ್ತೊಂಬತ್ತು ಶಾಸಕರು ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಇವರು ಹೊಸ ಸರ್ಕಾರದ ಕೇಂದ್ರಬಿಂದುವಾಗಲಿದ್ದಾರೆ. ಚೌಧರಿ ಮತ್ತು ಸಿನ್ಹಾ ಹಿಂದಿನ ಅವಧಿಯಲ್ಲೂ ಡಿಸಿಎಂ ಆಗಿದ್ದರು. ಈ ಬಾರಿಯೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಿಜಯ್ ಚೌಧರಿ, ಬಿಜೇಂದ್ರ ಪ್ರಸಾದ್ ಯಾದವ್, ಶ್ರವೋನ್ ಕುಮಾರ್, ಮಂಗಲ್ ಪಾಂಡೆ, ದಿಲೀಪ್ ಜೈಸ್ವಾಲ್, ಅಶೋಕ್ ಚೌಧರಿ, ಲೇಶಿ ಸಿಂಗ್, ಮದನ್ ಸಾಹ್ನಿ, ನಿತಿನ್ ನಬಿನ್, ರಾಮ್ ಕೃಪಾಲ್ ಯಾದವ್, ಸಂತೋಷ್ ಕುಮಾರ್ ಸುಮನ್, ಸುನಿಲ್ ಕುಮಾರ್, ಎಂಡಿ ಜಮಾ ಖಾನ್, ಸಂಜಯ್ ಸಿಂಗ್ ಟೈಗರ್, ಅರುಣ್ ಶಂಕರ್ ಪ್ರಸಾದ್, ಸುರೇಂದ್ರ ಮೆಹತಾ, ನಾರಾಯಣ ಪ್ರಸಾದ್, ರಾಮ ನಿಶಾದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಐತಿಹಾಸಿಕ ಜಯ ಸಾಧಿಸಿ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದರೆ, ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
































