ದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವ, ದೇಶಾದ್ಯಂತ ಗೋಹತ್ಯೆ ನಿಷೇಧಿಸುವ ಪ್ರಸ್ತಾವನೆಗಳು ಸದ್ಯ ಕೇಂದ್ರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.
ಗೋಹತ್ಯೆಗೆ ಸಂಬಂಧಿಸಿದ ಕಾನೂನುಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ರಾಜ್ಯ ಸರ್ಕಾರಗಳು ಸ್ಥಳೀಯ ಪರಿಸ್ಥಿತಿಗಳ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಭವಿಷ್ಯದಲ್ಲಿ ಅಂತಹ ಪ್ರಸ್ತಾವನೆಗಳು ಸಂಪುಟದ ಮುಂದೆ ಬಂದರೆ, ಅದರ ವಿವರಗಳನ್ನು ತಿಳಿಸುವುದಾಗಿ ಹೇಳಿದ್ದಾರೆ.































