ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಏಪ್ರಿಲ್ 20ಕ್ಕೆ ಕೊನೆಗೊಳ್ಳಲಿದೆ.
ಆಯಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.
21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯಾಗಿದೆ. ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ಜರುಗಲಿದೆ.