ಚಿತ್ರದುರ್ಗ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಫೆಬ್ರವರಿ 1 ರಂದು ಭಾನುವಾರ ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9:30 ರಿಂದ ಪ್ರಾರಂಭವಾಗುವ ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಬಿ.ಇ. ಹಾಗೂ ಯಾವುದೇ ಪದವಿ ಹೊಂದಿರುವ 18 ರಿಂದ 35 ವರ್ಷದೊಳಗಿನ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ
ಅಭ್ಯರ್ಥಿಗಳು https://forms.gle/y1K2jUfNxbk8ZYmw7 ಅಥವಾ ಕ್ಯೂ ಆರ್ ಕೋಡ್ ಬಳಸಿ ನೋಂದಣಿ ಯಾಗುವುದು ಕಡ್ಡಾಯವಾಗಿರುತ್ತದೆ. ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಕನಿಷ್ಠ 5 ಬಯೋಡೇಟಾ ಪ್ರತಿ ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಘಟಕ, ತಾಲ್ಲೂಕು ಪಂಚಾಯತ್ ಕಚೇರಿ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
































