ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್

WhatsApp
Telegram
Facebook
Twitter
LinkedIn

ಬೆಂಗಳೂರು :ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳ ಹೇಳಿಕೆ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಅಂತಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ವಿವಾದ ಕುರಿತು ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.

 

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon