ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶವಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 500ಕ್ಕೂ ಹೆಚ್ಚು ವಿಶೇಷಾಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು ಮೇ.20ರವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬಹುದು. ಇದಲ್ಲದೆ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಶೇ.60 ಅಂಕದೊಂದಿಗೆ ಹಣಕಾಸು ವಿಷಯದಲ್ಲಿ ವಿಶೇಷ ಅಧ್ಯಯನ ಮಾಡಿರಬೇಕು.
ಅಭ್ಯರ್ಥಿಗಳಿಗೆ ಕನಿಷ್ಠ 22 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಯೂನಿಯನ್ ಬ್ಯಾಂಕಿನ ಅಫೀಶಿಯಲ್ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಇರುವ ಮಾನದಂಡಗಳನ್ನು ಗುರುತಿಸಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.