ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2023ರ ಫೈನಲ್ ಫೈಟ್ ಇಂದು (ಭಾನುವಾರ) ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಈ ಪಂದ್ಯಕ್ಕೆ ಉಭಯ ತಂಡಗಳ ಆಟಗಾರರು ಭರ್ಜರಿ ತಯಾರಿ ನಡೆಸಿದ್ದಾರೆ. ಫೈನಲ್ ಪಂದ್ಯದಲ್ಲಿ 20 ವರ್ಷಗಳ ಬಳಿಕ ಮುಖಾಮುಖಿಯಾಗುತ್ತಿವೆ. ಇಂದು ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಒಂದು ಬದಲಾವಣೆಯ ಸಾಧ್ಯತೆ ಇದೆ. ಏಕೆಂದರೆ ಅಹಮದಾಬಾದ್ ಪಿಚ್ ಸ್ಪಿನ್ ಬೌಲರ್ಗಳಿಗೆ ಸಹಕಾರಿಯಾಗಿದೆ. ಹೀಗಾಗಿ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ಅವಕಾಶ ಸಿಗಬಹುದು. ಅಲ್ಲದೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಡಬಹುದು. ಈ ಮೂಲಕ ಟೀಮ್ ಇಂಡಿಯಾ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.