ಚಿತ್ರದುರ್ಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ.10 ಮತದಾನ ಹಾಗೂ ಮೇ.13 ರಂದು ಮತ ಎಣಿಕೆ ನಡೆಯಲಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ, ಮೇ.8 ರ ಬೆಳಿಗ್ಗೆ 6 ಗಂಟೆಯಿಂದ ಮೇ.10 ರ ಮಧ್ಯರಾತ್ರಿ 12 ಗಂಟೆವರಗೆ ಹಾಗೂ ಮೇ.13 ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ವರೆಗೆ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ, ಬಾರ್, ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ.
ಆದೇಶ ಉಲ್ಲಂಘಿಸಿದವರ ವಿರುದ್ದ ಪ್ರಜಾಪ್ರತಿನಿಧಿ ಹಾಗೂ ಅಬಕಾರಿ ಕಾಯ್ದೆ ಪ್ರಕಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.