ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಿಮಿತ್ತ ಮಾರ್ಚ್ 09 ರಿಂದ 24 ರವರೆಗೆ ನಡೆಯಲಿದ್ದು, ಮಾ. 16 ರಂದು ರಥೊತ್ಸವ ಜರುಗಲಿದೆ.
ಈ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ಫೆ. 17 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠ ಆವರಣದಲ್ಲಿ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಹಿಸುವರು. ಸಭೆಯಲ್ಲಿ ಮೊಳಕಾಲ್ಮೂರು ಶಾಸಕರು, ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.