ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸ್‌ಗಳ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸ್‌ಗಳ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವರ್ಗ-1, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ: ಗರಿಷ್ಠ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ: ಗರಿಷ್ಠ ರೂ. 1.00 ಲಕ್ಷ ಆದಾಯ ಮಿತಿ ಹೊಂದಿರಬೇಕು.

https://shp.karnataka.gov.in/bcwd ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ. ಹೊಸ ಅರ್ಜಿಗಳನ್ನು ಜುಲೈ 23 ರಂದು ಪರಿಶೀಲನೆ ಮಾಡಲಾಗುವುದು. ಜುಲೈ 27 ರಂದು ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಜುಲೈ 30 ರೊಳಗೆ ಪ್ರವೇಶ ಪಡೆಯಬೇಕು.

ಹೆಚ್ಚಿನ ವಿವರಗಳಿಗಾಗಿ ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಅರ್ಹತೆ, ಮತ್ತು ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcwd.karnataka.gov.in/ ಅನ್ನು ವೀಕ್ಷಿಸಬಹುದು. ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳ ಆದಲ್ಲಿ, ವಿದ್ಯಾರ್ಥಿಗಳು [email protected] ಇ-ಮೇಲ್ ಮುಖಾಂತರ ಅಥವಾ ಸಂಬಂಧಪಟ್ಟ ಜಿಲ್ಲಾ/ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ಚಿತ್ರ AI)

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon