ಹೈದರಾಬಾದ್ :ತಿರುಮಲ ತಿರುಪತಿ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದ ಅವರು, . ಈ ವೇಳೆ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು. ಒಂದು ವೇಳೆ ಕ್ರೈಸ್ತರು, ಇತರ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ದೇಶದಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ನಿರ್ಮಿಸುವ ಯೋಜನೆ ಇದೆ ಎಂದು ಪ್ರಕಟಿಸಿದರು. ದೇವಾಲಯಗಳ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಿಎಂ ನಾಯ್ಡು ಘೋಷಿಸಿದರು.