ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನ ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್ ಅವರ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೇ ಹೇಳಿಕೆಗು ಇದಕ್ಕೂ ಏನು ಸಂಬಂಧ? ಬೆಜೆಪಿ ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಅಂತ ಅದನ್ನ ಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ” ಎಂದು ಹೇಳಿದರು.
“ಬೆರಳಣಿಕೆಯ ಮಂದಿಗೆ ಮಾತ್ರ ಬೂಕರ್ ಪ್ರಶಸ್ತಿ ಬಂದಿದೆ. ನಾನೇ ಅವರ ಹೆಸರನ್ನ ಆಯ್ಕೆ ಮಾಡಿದ್ದೇನೆ. ಉದ್ಘಾಟಕರು ದನ ತಿನ್ನುವುದನ್ನ ಬಿಜೆಪಿಯವರು ನೋಡಿದ್ದಾರಾ? ಅವರನ್ನ ವಿರೋಧಿಸಲೇಬೇಕೆಂದು ವಿರೋಧ ಮಾಡ್ತಿದ್ದಾರೆ. ದಸರಾ ಒಂದು ಸಾಂಸ್ಕೃತಿಕ ಹಬ್ಬ. ಇದು ಧರ್ಮಾತೀತವಾದ ಹಬ್ಬ. ಇದು ಎಲ್ಲಾ ಜಾತಿ, ಧರ್ಮಕ್ಕೆ ಸೇರಿದ್ದು. ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಟಿಪ್ಪು ಹೈದಾರಲಿ ಕೂಡ ದಸರಾ ನಡೆಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಕೂಡ ದಸರಾ ನಡೆಸಿದ್ದಾರೆ. ಇದಕ್ಕೆ ಧರ್ಮದ ಲೇಪನ ಬಳಿಯುವುದು ಸರಿಯಲ್ಲ” ಎಂದರು.