ಇಸ್ಲಾಮಾಬಾದ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22 ರಂದು ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆದಿದೆ. ಇದೀಗ ಭಾರತದ ದಾಳಿಗೆ ತತ್ತರಿಸಿರುವ ನಾಗರಿಕರು ಅಲ್ಲಿನ ಮಸರಸಾಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಭಾರತದ ‘ಆಪರೇಷನ್ ಸಿಂಧೂರ’ ಬಳಿಕ ಪಾಕ್ ನಾಗರಿಕರು ಹಾಗೂ ವಿದ್ಯಾರ್ಥಿಗಳು ಅಲ್ಲಿನ ಮದರಸಾಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮದರಸಾಗಳಲ್ಲಿ ಭಯೋತ್ಪಾದನೆಯ ಪಾಠ ಬೋಧಿಸಲಾಗುತ್ತಿದೆ ಎಂದು ಆರೋಪಿಸಿ ಪಾಕ್ ನಾಗರಿಕರು ಹಾಗೂ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೂಡಲೇ ಇಂತಹ ಮದರಸಾಗಳನ್ನ ಬಂದ್ ಮಾಡುಂತೆಯೂ ನಾಗರಿಕರು ಆಗ್ರಹಿಸಿದ್ದಾರೆ.
ಸದ್ಯ ಪಾಕ್ನ ಗುಹೆರ್ಬಾದ್ ಜಿಲ್ಲೆಯ ಸರ್ಕಾರಿ ಬಾಲಕರ ಫ್ರೌಡಶಾಲೆ ಮೇಲೆ ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರೂ ಸೇರಿದಂತೆ ಎಲ್ಲಾ ನಾಗರಿಕರು ಕಲ್ಲು ತೂರಾಟ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋನಲ್ಲಿ ಮಹಿಳಾ ವಿದ್ಯಾರ್ಥಿಗಳು ಹಾಗೂ ನಾಗರಿಕರು ಆಕ್ರೋಶಭರಿತರಾಗಿ ಕಲ್ಲು ತೂರಾಟ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.
ಭಾರತ-ಪಾಕ್ ನಡುವಿನ ಉದ್ವಿಗ್ನತೆಯ ಬೆನ್ನಲ್ಲೇ ಪಾಕ್ನಲ್ಲಿ ಆಂತರಿಕ ದಂಗೆ ಶುರುವಾದಂತೆ ಕಾಣ್ತಿದೆ. ಒಂದೆಡೆದ ಪ್ರತ್ಯೇಕ ಬಲೂಚಿಸ್ತಾನ ದೇಶಕ್ಕಾಗಿ ಬಲೂಚಿಸ್ತಾನ ಲಿಬರೇಶನ್ ಆರ್ಮಿ ಹೋರಾಟಕ್ಕಿಳಿದಿದೆ. ಈ ನಡುವೆ ತಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ದಕ್ಷಿಣ ವಜೀರಿಸ್ತಾನದ ಮಿಲಿಟರಿ ಹೊರಠಾಣೆ ಮೇಲೆ ನಡೆಸಿದ ದಾಳಿಯಲ್ಲಿ 20 ಪಾಕಿಸ್ತಾನಿ ಸೈನಿಕರನ್ನ ಹತ್ಯೆ ಮಾಡಿ ಆತಂಕ ಸೃಷ್ಟಿಸಿದೆ. ಈ ಘಟನೆಯ ಬೆನ್ನಲ್ಲೇ ಪಾಕ್ ನಾಗರಿಕರು ಮದರಸಾಗಳ ವಿರುದ್ಧ ತಿರುಗಿ ಬಿದ್ದಿರುವುದು ಆಂತರಿಕ ದಂಗೆಯ ಮುನ್ಸೂಚನೆಯಾಗಿದೆ.