ನವದೆಹಲಿ : ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಅನುಮೋದಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ವಜಾ ಮಾಡಿದೆ.