ಬೆಂ.ಗ್ರಾ.ಜಿಲ್ಲೆ : ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ವೀಕ್ಷಣೆ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಿಗಳೊಡನೆ ಪರಸ್ಪರ ಚರ್ಚೆಯಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ಸ್ವಸಹಾಯ ಗುಂಪುಗಳ 12 ಸದಸ್ಯರು ನಿಯೋಜನೆ ಗೊಂಡಿದೆ.
ಜಿಲ್ಲೆಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಶಿರಾವರ ಗ್ರಾಮದ ಕೃಷಿ ಸಖಿ ಹಾಗೂ ಸ್ವಸಹಾಯ ಗುಂಪಿನ ಸದಸ್ಯರಾದ ಪದ್ಮಾವತಿ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.