ನವದೆಹಲಿ: ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್‌ದಲ್ಲಿ ನಡೆದ ಭಾರತೀಯ ಹತ್ಯೆ ವಿರುದ್ಧ ಭಾರತ ಒಂದಾಗಿ ನಿಲ್ಲಬೇಕಿದೆ. ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವುದು ಮುಖ್ಯ ಎಂದು ಪ್ರತಿಪಕ್ಷಗಳು ನಂಬುತ್ತವೆ.
ಇದು ನಮ್ಮ ಸಾಮೂಹಿಕ ಸಂಕಲ್ಪದ ಪ್ರಬಲ ಪ್ರದರ್ಶನವಾಗಿದೆ ಮತ್ತು 22 ಏಪ್ರಿಲ್ 2025 ರಂದು ಅಮಾಯಕ ನಾಗರಿಕರ ಮೇಲೆ ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಎದುರಿಸುವ ಇಚ್ಛೆಯಾಗಿದೆ. ಅದಕ್ಕೆ ಅನುಗುಣವಾಗಿ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ವಿನಂತಿಸಿದ್ದಾರೆ.