ಇಸ್ಲಾಮಾಬಾದ್ : ಭಾರತ- ಪಾಕಿಸ್ತಾನದ ಮಧ್ಯೆ ಯುದ್ಧ ಸಂಭವಿಸಿದರೆ ನಾನು ಇಂಗ್ಲೆಂಡಿಗೆ ಪಲಾಯನ ಮಾಡುತ್ತೇನೆ ಎಂದು ಪಾಕ್ ಸಂಸದ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒಂದು ವೇಳೆ ಯುದ್ಧ ನಡೆದರೆ ಗನ್ ಹೊತ್ತುಕೊಂಡು ಗಡಿಗೆ ಹೋಗುತ್ತೀರಾ ಎಂದು ಸಂಸದ ಶೇರ್ ಅಫ್ಜಲ್ ಖಾನ್ ಮಾರ್ವತ್ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಯುದ್ಧ ನಡೆದರೆ ನಾನು ಇಂಗ್ಲೆಂಡ್ಗೆ ಪಲಾಯನ ಮಾಡುತ್ತೇನೆ ಎಂದಿದ್ದಾರೆ.
ಎರಡು ದೇಶಗಳ ಮಧ್ಯೆ ಇರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನರೇಂದ್ರ ಮೋದಿ ಹಿಂದೆ ಸರಿಯಬೇಕು ಎಂದು ಭಾವಿಸುತ್ತೀರಾ ಎಂದು ಕೇಳಿದ್ದಕ್ಕೆ, ನಾನು ಹೇಳಿದ್ದಕ್ಕೆ ಅವರು ಹಿಂದೆ ಸರಿಯಲು ಮೋದಿ ನನ್ನ ಚಿಕ್ಕಮ್ಮನ ಮಗನೇ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.
ಅಫ್ಜಲ್ ಖಾನ್ ಮಾರ್ವತ್ ಉತ್ತರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪಾಕಿಸ್ತಾನಿ ರಾಜಕಾರಣಿಗಳು ಸಹ ತಮ್ಮ ಸೈನ್ಯವನ್ನು ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಕಮೆಂಟ್ ಮಾಡುತ್ತಿದ್ದಾರೆ.