ವಾಷಿಂಗ್ಟನ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿರುವುದಕ್ಕೆ ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ತೀವ್ರ ಅಸಮಾಧಾನ ಹೊರಹಾಕಿದ್ದು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ನನ್ನು ಉಗ್ರರ ಪಟ್ಟಿಗೆ ಸೇರಿಸಬೇಕು ಮತ್ತು ಈತನ ಅಂತ್ಯವು ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನಂತೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುನೀರ್ ಮತ್ತು ಬಿನ್ ಲಾಡೆನ್ ನಡುವಿನ ಏಕೈಕ ವ್ಯತ್ಯಾಸವೆಂದರೆ, ಮುನೀರ್ ಅರಮನೆಯಲ್ಲಿ ವಾಸಿಸುತ್ತಿದ್ದಾನೆ. ಲಾಡೆನ್ ಗುಹೆಯಲ್ಲಿ ವಾಸಿಸುತ್ತಿದ್ದ. ಪಹಲ್ಗಾಮ್ ದಾಳಿಗೆ ಅಮೆರಿಕ ತೆಗೆದುಕೊಳ್ಳಬಹುದಾದ ಏಕೈಕ ಕ್ರಮ ಎಂದರೆ, ಪಾಕಿಸ್ತಾನವನ್ನು ಭಯೋತ್ಪಾದನೆಯ ಪ್ರಾಯೋಜಕ ರಾಷ್ಟ್ರ ಎಂದು ಘೋಷಿಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಿಲ್ ಕ್ಲಿಂಟನ್ ಭಾರತಕ್ಕೆ ಬಂದಿದ್ದಾಗ ಭಯೋತ್ಪಾದಕ ದಾಳಿ ನಡೆದಂತೆಯೇ, ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಭಾರತ ಪ್ರವಾಸದಲ್ಲಿದ್ದಾಗ ದಾಳಿ ನಡೆದಿದ್ದು, ಪಾಕಿಸ್ತಾನ ಗಮನ ಸೆಳೆಯಲು ಬಯಸುತ್ತಿದೆ ಎಂದು ಕಿಡಿಕಾರಿದ್ದಾರೆ.