ಬೆಳಗಾವಿ : 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.