ನವದೆಹಲಿ : ಸ್ವಾತಂತ್ರ್ಯ ದಿನದಿಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜ ಹಾರಿಸುವುದನ್ನ ತಡೆಯಲು ಬಹುಮಾನ ಘೋಷಿಸಿದ್ದ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಎನ್ಐಎ ಪ್ರಕರಣ ದಾಖಲು ಮಾಡಿದೆ.
ಆಗಸ್ಟ್ 10 ರಂದು ಲಾಹೋರ್ನ ಪ್ರೆಸ್ ಕ್ಲಬ್ನಲ್ಲಿ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಪನ್ನುನ್ ಪ್ರಚೋದನಕಾರಿ ಘೋಷಣೆ ಮಾಡಿದ್ದ. ಆ.15 ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ತ್ರಿವರ್ಣ ಧ್ವಜ ಹಾರಿಸುವುದನ್ನು ತಡೆಯುವ ಸಿಖ್ಖ್ ಸೈನಿಕರಿಗೆ 11 ಕೋಟಿ ರೂ. ಬಹುಮಾನ ಘೋಷಿಸಿದ್ದ.
ಸದ್ಯ ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಭಾರತದ ವಿರುದ್ಧ ಸಿಖ್ಖರಲ್ಲಿ ಅಸಮಾಧಾನ ಹರಡಿದ್ದಕ್ಕಾಗಿ ಪನ್ನುನ್ ವಿರುದ್ಧ ಎನ್ಐಎ ಪ್ರಕರಣ ದಾಖಲಿಸಿದೆ.