ಬೆಂಗಳೂರು : ಸಿಎಂ ಭೋಜನ ಮೀಟಿಂಗ್ ಕರೆದಿರೋದಕ್ಕೂ ಎರಡೂವರೆ ವರ್ಷ ಅಧಿಕಾರ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಅಂತ ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಭೋಜನ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ಊಟಕ್ಕೆ ಕರೆಯುತ್ತಾರೆ. ಸೆಷನ್ ಇದ್ದಾಗಲೂ ಅವರು ಕರೆಯುತ್ತಾರೆ. ಕೆಲವರು ಮಂತ್ರಿಗಳು ಕರೆಯುತ್ತಾರೆ. ಅದೇ ರೀತಿ ಈಗ ಸಿಎಂ ಕರೆದಿದ್ದಾರೆ. ನಾನು ಹೇಳೋದು ಇದೇನು ದೊಡ್ಡದಲ್ಲ. ಊಟಕ್ಕೂ, ಎರಡೂವರೆ ವರ್ಷ ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ ಎಂದರು.
ಬಿಹಾರ ಎಲೆಕ್ಷನ್ ವಿಚಾರವಾಗಿ ಸಿಎಂ ಕರೆದಿದ್ದಾರೆಂಬ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಬಿಜೆಪಿಯವರು ಹೇಗೆ ಬೇಕಾದ್ರೂ ಮಾತನಾಡಬಹುದು. ಹಾಗೆ ಮಾತನಾಡಬೇಕು ಹೀಗೆ ಮಾತಾಡಬೇಕು ಅಂತ ಏನಿಲ್ಲ. ಅವರು ಏನು ಬೇಕಾದರು ಮಾತನಾಡಬಹುದು ಅಂತ ತಿರುಗೇಟು ಕೊಟ್ಟರು.