ಹಾವೇರಿ: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ತಿಂಗಳಿಗೆ 2000 ರೂ. ಪಿಂಚಣಿ ನೀಡುವ ಯೋಜನೆಯನ್ನು ಆರಂಭಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ಸಿಎಂ ಆಗಿದ್ದಾಗ ಇಂಥಹ ಯೋಜನೆಯನ್ನು ಜಾರಿಗೊಳಿಸಿದ್ದೆ. ಈಗ ಆ ಯೋಜನೆಯನ್ನು ಆರಂಭಿಸಲಾಗುತ್ತದೆ.
ನಮ್ಮ ಸರ್ಕಾರ ಬಂದ ಮೇಲೆ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಬಿಜೆಪಿ ಅವಧಿಯಲ್ಲೂ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನಾವು ಪರಿಹಾರ ನೀಡುತ್ತೇವೆ ಎಂದಿದ್ದಾರೆ.