ಚಿತ್ರದುರ್ಗ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ-2023ರ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಾದ Facebook, Twitter, Instagram, youtube, Blogs, websites, Whatsapp ಗಳಲ್ಲಿ ಜಾಹೀರಾತು ಮೂಲಕ ಪ್ರಚುರ ಪಡಿಸಲು ಜಿಲ್ಲಾ MCMC ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
District Social Media Cell, ಜಿಲ್ಲಾ ಮಾಧ್ಯಮ ಪರಿಶೀಲನಾ ಸಮಿತಿ, ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ಜಿಲ್ಲಾ ಪಂಚಾಯತ್ ಜಿಲ್ಲಾ ಸಂಪನ್ಮೂಲ ಕೇಂದ್ರ ಕಚೇರಿಯಲ್ಲಿ ಸ್ಥಾಪಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಪೋಸ್ಟ್‍ಗಳು ಕಂಡುಬಂದಲ್ಲಿ ದೂರು ಸಲ್ಲಿಸಲು District Social Media Cell ನ ಇ-ಮೇಲ್ socialmediacellcta@gmail.com ಮೂಲಕ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದ್ದಾರೆ.