ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ.
ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.






























