ಚಿತ್ರದುರ್ಗ : ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ.ಬಸವರಾಜ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ಬೆನಕನಹಳ್ಳಿ ಅವರ ಮಾರ್ಗದರ್ಶನದಲ್ಲಿ “ಹಿಂದುಳಿದ ವರ್ಗಗಳ ರಾಜಕಾರಣ ಮತ್ತು ಗ್ರಾಮ ಪಂಚಾಯಿತಿಗಳು: ದಾವಣಗೆರೆ ಜಿಲ್ಲೆಯ ಒಂದು ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸಿದ್ದಾರೆ. ಬಿ.ಕೆ.ಬಸವರಾಜ ಅವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕು ಬೆಣ್ಣೆಹಳ್ಳಿ ಗ್ರಾಮದ ಶಿಕ್ಷಕ ದಿ.ಬಿ.ಕರಿಯಪ್ಪ ಮತ್ತು ದಿ.ಕಮಲಮ್ಮನವರ ಕೊನೆಯ ಪುತ್ರರಾಗಿದ್ದಾರೆ.

































