ದಾವಣಗೆರೆ: ರಾಮಾಯಣದಲ್ಲಿನ ತತ್ವಾದರ್ಶ ಹಾಗೂ ಅದರಲ್ಲಿನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಅವರು (17) ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಲಾಗಿದ್ದ. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನದ ನಿರ್ಮಾಣಕ್ಕೆ ರೂ. 20 ಲಕ್ಷ, ಹೋಬಳಿ ಮತ್ತು ಪಟ್ಟಣ ಪಂಚಾಯಿತಿ ಮಟ್ಟದಲ್ಲಿ 75 ಲಕ್ಷ ,ತಾಲೂಕು ಮಟ್ಟದಲ್ಲಿ 200 ಲಕ್ಷ ಮತ್ತು ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು ರೂ. 400 ಲಕ್ಷ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಪ್ರಥಮ ಹಂತದಲ್ಲಿ 7 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಎಲ್ಲಾ ತರಹದ ಅಭಿವೃದ್ದಿ ಕಾಮಗಾರಿಗಳನ್ನು ಇಲ್ಲಿ ಅನುμÁ್ಠನಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲೆಯ 44 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಲ್ಲಿನ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ ಎಂದು ತಿಳಿಸಿದರು.
ಮಾಯಕೊಂಡ ಕ್ಷೇತ್ರ ಶಾಸಕರಾದ ಕೆ.ಎಸ್ ಬಸವಂತಪ್ಪ ಮಾತನಾಡಿ. ವಾಲ್ಮೀಕಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಇದನ್ನು ಇಡೀ ಮಾನವ ಕುಲ ಆಚರಿಸುವಂತಹ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗದಲ್ಲಿ ಹುಟ್ಟಿ, ತನ್ನದೇ ಆದ ಮಹತ್ವವನ್ನು ನಿರೂಪಿಸಿದ ಇವರ ಸಾಹಿತ್ಯ ಪ್ರಪಂಚ ಇರೋವರೆಗೂ ಪ್ರಸ್ತುತವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ ಜಿ.ಎಂ ಮಾತನಾಡಿ. ನಮ್ಮ ಸಂಸ್ಕೃತಿ ಮತ್ತು ಪಾಶ್ಚಿಮಾತ್ಯ ಪ್ರದೇಶಗಳ ಸಂಸ್ಕೃತಿ ರಾಮಾಯಣದಿಂದ ರಚಿತವಾಗಿದೆ. ಭಾರತದ ಯಾವುದೇ ಮೂಲೆಗೆ ಹೋದರೂ ಇಲ್ಲಿ ನಮ್ಮ ಸಂಸ್ಕೃತಿ ವಿಸ್ತಾರವಾಗಿದೆ ಎಂದು ತಿಳಿಸಿದರು.
ಸಂಸ್ಕೃತ ಪುರಾಣದಲ್ಲಿ ಒಂದು ಪ್ರತಿತಿಯಿದೆ, ಯಾರಾದರೂ ವಿಜಯದಶಮಿ ದಿನದಂದು ರಾಮಾಯಣ ಓದಿದರೆ ಅವರಿಗೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.
ರಾಮಾಯಣ ಓದುವುದರಿಂದ ಜೀವನದ ಪಾಠ, ವಿದ್ಯೆ, ಶ್ರದ್ದೆಯನ್ನು ನಾವುಗಳು ಅಳವಡಿಸಿಕೊಳ್ಳುವ ಮಹತ್ವದ ಸಂದೇಶವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೇಯರ್ ಚಮನ್ ಸಾಬ್ ಕೆ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ , ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ , ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ. ನವೀನ್ ಸಿ ಮಠದ್, ವಾಲ್ಮೀಕಿ ಸಮಾಜದ ಮುಖಂಡರು, ಅಧ್ಯಕ್ಷರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.