ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆಗೆ ಸರ್ಕಾರ ಸಿದ್ಧತೆ ನಡೆಸಿದೆ.
ಈಗಾಗಲೇ ಕೇಂದ್ರ ಸರ್ಕಾರ 16 ಕಂತುಗಳ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಿದೆ.
17 ನೇ ಕಂತಿನ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗಳಿಗೆ ನೇರ ಜಮೆ ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ 2,000ರೂ. ಹಣ ರೈತರ ಖಾತೆಗಳಿಗೆ ಜೂನ್ ಅಂತ್ಯ ಅಥವಾ ಜುಲೈ ಮೊದಲ ವಾರದಲ್ಲಿ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.